ಎಸೆಸೆಲ್ಸಿ ಪರೀಕ್ಷಾ ಶುಲ್ಕ ಪಾವತಿ ದಿನಾಂಕ ವಿಸ್ತರಣೆ

Update: 2017-10-12 14:46 GMT

ಬೆಂಗಳೂರು, ಅ.12: ಮುಂದಿನ ಮಾರ್ಚ್/ಎಪ್ರಿಲ್‌ನಲ್ಲಿ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆಗೆ ಬರೆಯಲಿರುವ ಅಭ್ಯರ್ಥಿಗಳ ನೋಂದಣಿ, ಪರೀಕ್ಷಾ ಶುಲ್ಕ ಹಾಗೂ ನಾಮಿನಲ್ ರೋಲ್ ಪ್ರಸ್ತಾವನೆಗಳನ್ನು ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ.

ಶಾಲಾ ಸಿಬ್ಬಂದಿ ತಮ್ಮ ಶಾಲೆಯ ವಿದ್ಯಾಥಿಗಳಿಂದ ಪರೀಕ್ಷಾ ಶುಲ್ಕ ಸ್ವೀಕರಿಸಿ ಬ್ಯಾಂಕ್‌ಗೆ ಚಲನ್ ಮೂಲಕ ಜಮೆ ಮಾಡಲು ಅ.26 ಹಾಗೂ ನಾಮಿನಲ್ ರೋಲ್ ಪ್ರಸ್ತಾವನೆ ಹಾಗೂ ಬ್ಯಾಂಕ್ ಚಲನ್‌ನ ಮೂಲ ಪ್ರತಿಶಾಲೆಗಳಿಂದ ಪರೀಕ್ಷಾ ಮಂಡಳಿಗೆ ತಲುಪಿಸಲು ಅ.28 ಕೊನೆ ದಿನವಾಗಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News