ವಿದ್ಯಾಸಿರಿ ಸಹಾಯಧನ: ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Update: 2017-10-12 14:42 GMT

ಬೆಂಗಳೂರು, ಅ. 12: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಸಹಾಯಧನಕ್ಕಾಗಿ ಮುಸ್ಲಿಂ, ಕ್ರೈಸ್ತ, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದ ಜಿಲ್ಲೆಯ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಯಡಿ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಸರಕಾರಿ/ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಸಿಗದೆ ಇರುವ ವಿದ್ಯಾರ್ಥಿಗಳಿಗೆ, ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯ ಒದಗಿಸಲು, ಪ್ರತೀ ತಿಂಗಳಿಗೆ 1,500 ರೂ.ನಂತೆ ಶೈಕ್ಷಣಿಕ ಅವಧಿಯ 10 ತಿಂಗಳು, ಸಂಬಂಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆನ್‌ಲೈನ್ ಮುಖಾಂತರ ಜಮಾ ಮಾಡಲಾಗುತ್ತದೆ.

ಕುಟುಂಬದ ವಾರ್ಷಿಕ ಆದಾಯ 2ಲಕ್ಷ ರೂ.ಮೀರಿರದ, ಸರಕಾರಿ/ಸ್ಥಳೀಯ ಸಂಸ್ಥೆ/ಅನುದಾನಿತ ಸಂಸ್ಥೆಗಳು/ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಸಂಸ್ಥೆಗಳಲ್ಲಿ-ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಅವಶ್ಯ ದಾಖಲೆಗಳೊಂದಿಗೆ ಬೆಂ.ಗ್ರಾ.ಜಿಲ್ಲೆಯ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೆ ಮಹಡಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಗೋಪುರ, ಬೆಂಗಳೂರು ಇವರಿಗೆ ಅ.30ರೊಳಗೆ ಸಲ್ಲಿಸಲು ಕೋರಿದೆ.

ನಿಗದಿತ ಅರ್ಜಿ ನಮೂನೆಯು ಇಲಾಖೆ ವೆಬ್‌ಸೈಟ್ www.gokdom.kar.nic.in ಅಥವಾ ಬೆಂ.ಗ್ರಾ.ಜಿಲ್ಲೆಯ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಥವಾ ತಾಲೂಕು ವಿಸ್ತರಣಾಧಿಕಾರಿಗಳು, ಹಿಂದುಳಿದ ವರ್ಗಗಳ/ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ, ನೆಲಮಂಗಲ ಇವರ ಕಚೇರಿಯಲ್ಲಿ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ: 080-2286 6966ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News