ಮಾಸ್ತಿಗುಡಿ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್

Update: 2017-10-12 15:54 GMT

ಬೆಂಗಳೂರು, ಅ.12: ದುನಿಯಾ ವಿಜಯ್ ನಟನೆಯ ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯ ಚಿತ್ರೀಕರಣದ ವೇಳೆ ಇಬ್ಬರು ನಟರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ್‌ಗೌಡ ಸೇರಿ ಐವರ ವಿರುದ್ಧ ರಾಮನಗರದ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಚಾರ್ಜ್‌ಶೀಟ್ ರದ್ದುಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.

ಉದಯ್ ಹಾಗೂ ಅನಿಲ್ ಅವರು ಕ್ಲೈಮ್ಯಾಕ್ಸ್ ಹಂತದ ಚಿತ್ರೀಕರಣದ ವೇಳೆ ಹೆಲಿಕಾಪ್ಟರ್‌ನಿಂದ ತಿಪ್ಪಗೊಂಡನಹಳ್ಳಿ ಕೆರೆಗೆ ಜಿಗಿದಿದ್ದರು. ಇಬ್ಬರಿಗೂ ಸರಿಯಾಗಿ ಈಜಲು ಗೊತ್ತಿರಲಿಲ್ಲ. ಸರಿಯಾದ ಸುರಕ್ಷತಾ ಕ್ರಮಗಳನ್ನು ಪಾಲಿಸಿರಲಿಲ್ಲ. ಹೀಗಾಗಿ, ಇಬ್ಬರು ದುರ್ಮರಣಕ್ಕೀಡಾಗಿದ್ದರು. ಈ ಹಿನ್ನೆಲೆಯಲ್ಲಿ ಚಿತ್ರದ ನಿರ್ಮಾಪಕ ಸುಂದರ್‌ಗೌಡ ಅವರನ್ನು ಎ-1ಆರೋಪಿಯಾಗಿದ್ದು, ನಿರ್ದೇಶಕ ನಾಗಶೇಖರ್ ಅವರು ಎ-2 ಆರೋಪಿ, ಸಹ ನಿರ್ದೇಶಕ ಎ-3 ಆರೋಪಿ, ಸಾಹಸ ನಿರ್ದೇಶಕ ರವಿವರ್ಮ ಅವರನ್ನು ಎ-4 ಆರೋಪಿಯನ್ನಾಗಿ ಪ್ರಕರಣ ದಾಖಲಿಸಲಾಗಿದೆ.

ಸಾಹಸ ಸಹ ನಿರ್ದೇಶಕ ಎ-5 ಆರೋಪಿಯಾಗಿದ್ದಾರೆ. ಹೀಗಾಗಿ, ಪೊಲೀಸರು ತನಿಖೆ ನಡೆಸಿ ಈ ಐವರ ವಿರುದ್ಧ ರಾಮನಗರ ನ್ಯಾಯಾಲಯಕ್ಕೆ ಚಾರ್ಚ್‌ಶೀಟ್ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News