ಅ. 15: ಪಿಎಫ್ಐ ವತಿಯಿಂದ ‘ನಮಗೂ ಹೇಳಲಿಕ್ಕಿದೆ’ ಮಹಾ ಸಮಾವೇಶ

Update: 2017-10-13 15:35 GMT

ಮಂಗಳೂರು, ಅ. 13: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವು ‘ನಮಗೂ ಹೇಳಲಿಕ್ಕಿದೆ’ ಎಂಬ ಘೋಷಣೆಯಡಿ ಅ. 15 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಹಾ ಸಮಾವೇಶವನ್ನು ಹಮ್ಮಿಕೊಂಡಿದೆ.

ಅ.15ರಂದು ಅಪರಾಹ್ನ 1 ಗಂಟೆಗೆ ಸರಿಯಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮಧ್ಯಾಹ್ನ 2 ಗಂಟೆಗೆ  ಸಭಾ ಕಾರ್ಯಕ್ರಮ ನಡೆಯಲಿದೆ. ಪಾಪ್ಯುಲರ್ ಫ್ರಂಟ್ ರಾಜ್ಯಾಧ್ಯಕ್ಷ ಮುಹಮ್ಮದ್ ಶಾಕಿಬ್ ಅಧ್ಯಕ್ಷತೆಯಲ್ಲಿ ಚೆಯರ್‌ಮೆನ್ ಇ. ಅಬೂಬಕರ್ ಮಹಾ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.

ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್, ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್ ಕಾರ್ಯದರ್ಶಿ ಮೌಲಾನಾ ಮುಹಮ್ಮದ್ ಉಮರೈನ್ ಮೆಅರೂಫ್ ರಹ್ಮಾನೀ, ಉರಿಲಿಂಗ ಪೆದ್ದಿಮಠ ಮೈಸೂರು ಇದರ ಜ್ಞಾನ ಪ್ರಕಾಶ್ ಸ್ವಾಮೀಜಿ, ಮೇಲುಕೋಟೆ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ, ಚಾಮರಾಜಪೇಟೆ ಶಾಸಕ ಝಮೀರ್ ಅಹ್ಮದ್, ರಾಜ್ಯ ಅಲ್ಪಸಂಖ್ಯಾತ ಆಯೋಗ ಅಧ್ಯಕ್ಷ ನಸೀರ್ ಅಹ್ಮದ್, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ಮಾಜಿ ಶಾಸಕ ಎ.ಕೆ ಸುಬ್ಬಯ್ಯ, ಬಿಎಸ್‌ಪಿ ರಾಜ್ಯಾಧ್ಯಕ್ಷ ಎನ್.ಮಹೇಶ್, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಂಜಗೆರೆ ಜಯಪ್ರಕಾಶ್, ರಾಜ್ಯ ರೈತ ಸಂಘ, ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಪ್ರಜಾ ಪರಿವರ್ತನಾ ಪಕ್ಷ ಅಧ್ಯಕ್ಷ ಬಿ.ಗೋಪಾಲ್, ಮಾಜಿ ಎಂಎಲ್‌ಸಿ ಎಲ್.ಹನುಮಂತಯ್ಯ, ದಲಿತ ಸ್ವಾಭಿಮಾನಿ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಮೋಹನ್ ರಾಜ್, ದಲಿತ ದಮನಿತರ ಸ್ವಾಭಿಮಾನಿ ವೇದಿಕೆ ರಾಜ್ಯ ಸಂಚಾಲಕ ಬಿ.ಅರ್.ಬಾಸ್ಕರ್ ಪ್ರಸಾದ್ ಮೊದಲಾದವರು ಸಮಾವೇಶದಲ್ಲಿ ಭಾಗವಸಲಿದ್ದಾರೆ ಎಂದು ಪಿಎಫ್‌ಐ ಮಾಧ್ಯಮ ಸಂಯೋಜಕ ಅಬು ಸಿನಾನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News