ಕಲ್ಲಾಪು: ಕಾಂಗ್ರೆಸ್ ಕಾರ್ಯಕರ್ತರಿಗೆ ಮಾಹಿತಿ ಕಾರ್ಯಾಗಾರ

Update: 2017-10-14 12:16 GMT

ಉಳ್ಳಾಲ, ಅ. 14: ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆಯಿಂದಾಗಿ ಬಿಜೆಪಿ ಮತ್ತು ವಿರೋಧ ಪಕ್ಷಗಳಿಗೆ ಯಾವುದೇ ರೀತಿಯ ಆರೋಪ ಮಾಡುವ ಅವಕಾಶ ಸಿಗುತ್ತಿಲ್ಲ. ಆದರೂ ಅಪಪ್ರಚಾರದಲ್ಲಿ ತೊಡಗಿದ್ದು, ಕಾರ್ಯಕರ್ತರು ದಿಟ್ಟ ಉತ್ತರ ನೀಡಬೇಕಿದೆ. ಮಂಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಸೇರಿದ ನೂತನ ಕಾರ್ಯಕರ್ತರಿಂದಾಗಿ ಪಕ್ಷ ಇನ್ನಷ್ಟು ಬಲಿಷ್ಟವಾಗಬೇಕಿದೆ ಎಂದು ಆಹಾರ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.

ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ಜಂಟಿ ಆಶ್ರಯದಲ್ಲಿ  ಕಲ್ಲಾಪು ಖಾಸಗಿ ಸಭಾಂಗಣದಲ್ಲಿ ಅಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಇಂದಿರಾ ಕ್ಯಾಂಟೀನ್‌ನಲ್ಲಿ ಸಿಗುವ ಆಹಾರ ಗುಣಮಟ್ಟದಿಂದ ಕೂಡಿರುವುದರಿಂದ ಶ್ರೀಮಂತರೂ ಆಕರ್ಷಿತರಾಗಿದ್ದಾರೆ. ಬಡವರು ಮಾತ್ರ ಹೋಗುತ್ತಿದ್ದ ಕ್ಯಾಂಟೀನ್‌ಗೆ ಹವಾನಿಯಂತ್ರಣ ಹೋಟೆಲ್‌ಗೆ ಹೋಗುತ್ತಿದ್ದವರೂ ಬರುವಂತೆ ಮಾಡಿರುವ ಸಾಧನೆ ಕಾಂಗ್ರೆಸ್‌ಗೆ ಸಲ್ಲುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತ ಇಸ್ಮಾಯಿಲ್ ಬಬ್ಬುಕಟ್ಟೆ ಸಹಿತ ಹಲವು ಮಂದಿ ಕಾಂಗ್ರೆಸ್ ಸೇರ್ಪಡೆಗೊಂಡರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮೂಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ, ಉಪಾಧ್ಯಕ್ಷ ಸುರೇಶ್ ಭಟ್ನಗರ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ ಕಾಜವ, ಉಳ್ಳಾಲ ನಗರ ಸಭಾಧ್ಯಕ್ಷ ಹುಸೈನ್ ಕುಂಞಿಮೋನು, ಸ್ಥಾಯಿ ಸಮಿತಿಯ ಅಧ್ಯಕ್ಷ ಉಸ್ಮಾನ್ ಕಲ್ಲಾಪು, ಸದಸ್ಯ ಬಾಝಿಲ್ ಡಿಸೋಜ, ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ರಶೀದಾ ಬಾನು, ಮಮತಾ ಗಟ್ಟಿ, ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು, ಸದಸ್ಯರಾದ ಅಬ್ದುಲ್ ಜಬ್ಬಾರ್ ಬೋಳಿಯಾರ್, ಅಬೂಬಕರ್ ಸಿದ್ದೀಕ್ ಕೊಳಂಗೆರೆ, ಸುರೇಖ ಚಂದ್ರಹಾಸ್, ಹೈದರ್ ಕೈರಂಗಳ, ಶಶಿಪ್ರಭಾ ಶೆಟ್ಟಿ, ಪದ್ಮಾವತಿ ಪೂಜಾರಿ, ಕೆಎಸ್‌ಆರ್‌ಟಿಸಿ ನಿಗಮದ ನಿರ್ದೇಶಕ ರಮೇಶ್ ಶೆಟ್ಟಿ ಬೋಳಿಯಾರ್, ಆಹಾರ ಜಾಗೃತಿ ಸಮಿತಿ ನಿರ್ದೇಶಕ ಟಿ.ಎಸ್.ಅಬ್ದುಲ್ಲಾ, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಮಂಜುನಾಥ, ಪದವೀಧರ ಕ್ಷೇತ್ರದ ಅಭ್ಯರ್ಥಿ ಎಸ್.ಪಿ. ದಿನೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ.ರವೂಫ್, ಪ್ರಧಾನ ಕಾರ್ಯದರ್ಶಿ ಸಮೀರ್ ಪಜೀರ್, ಅಂಬ್ಲಮೊಗರು ಗ್ರಾ.ಪಂ. ಅಧ್ಯಕ್ಷ ಮುಹಮ್ಮದ್ ರಫೀಕ್, ಇರಾ ಗ್ರಾ.ಪಂ. ಅಧ್ಯಕ್ಷ ರಝಾಕ್ ಕುಕ್ಕಾಜೆ, ಜಿ.ಪಂ. ಸ್ಥಾಯಿ ಸಮಿತಿಯ ಅಧ್ಯಕ್ಷ ಶಾಹುಲ್ ಹಮೀದ್, ಸದಾಶಿವ ಉಳ್ಳಾಲ್, ಪದ್ಮನಾಭ ನರಿಂಗಾನ, ಚಿತ್ರನಟ ರಾಜಶೇಖರ್ ಕೋಟ್ಯಾನ್, ನಝರ್ ಷಾ ಪಟ್ಟೋರಿ, ಉಮ್ಮರ್ ಪಜೀರ್, ಎನ್.ಎಸ್.ಕರೀಂ, ಇಕ್ಬಾಲ್ ಸಾಮಾಣಿಗೆ, ಸಲೀಂ ಮೆಘಾ ಅಸೈಗೋಳಿ ಇನ್ನಿತರರು ಉಪಸ್ಥಿತರಿದ್ದರು.

ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಕೋಡಿಜಾಲ್ ಸ್ವಾಗತಿಸಿದರು. ಉಪಾಧ್ಯಕ್ಷ ಮಹಮ್ಮದ್ ಮುಸ್ತಫಾ ಮಲಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಡಿಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೋಂಟುಗೋಳಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News