ಎಸ್‌ವೈಎಸ್ ಬಿ.ಸಿ.ರೋಡ್ ಘಟಕ: ಪದಾಧಿಕಾರಿಗಳ ಆಯ್ಕೆ
ಬಂಟ್ವಾಳ, ಅ. 14: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈಎಸ್ ಬಿ. ಸಿ.ರೋಡ್ ಘಟಕದ ವಾರ್ಷಿಕ ಮಹಾಸಭೆಯು ಬಿ.ಸಿ.ರೋಡಿನ ಜಿಲ್ಲಾ ಕಚೇರಿಯಲ್ಲಿ ಇತ್ತೀಚೆಗೆ ನಡೆಯಿತು. ಇದೇ ಸಂದರ್ಭದಲ್ಲಿ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷರಾಗಿ ಬಶೀರ್ ಹಾಜಿ ಕೈಕಂಬ,ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಸಿದ್ದೀಕ್ ಮತ್ತು ಕೋಶಾಧಿಕಾರಿಯಾಗಿ ಬಶೀರ್ ಪರ್ಲಿಯ ಅವರನ್ನು ಆಯ್ಕೆ ಮಾಡಲಾಯಿತು.
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಇಸ್ಮಾಯಿಲ್ ಮಿತ್ತಬೈಲ್, ಅಶ್ರಫ್ ಮದನಿ ಬಂಟ್ವಾಳ, ರಫೀಕ್ ಮುಸ್ಲಿಯಾರ್ ಅರಬ್ಬಿಗುಡ್ಡೆ, ಇಬ್ರಾಹಿಂ ಪರ್ಲಿಯ, ಇಬ್ರಾಹಿಂ ಬಿ.ಸಿ.ರೋಡ್ ಅವರನ್ನು ಆಯ್ಕೆ ಮಾಡಲಾಯಿತು.
ಎಸ್‌ವೈಎಸ್ ಬಂಟ್ವಾಳ ಸೆಂಟರ್‌ನ ಅಧ್ಯಕ್ಷ ಅಬ್ದುಲ್ ಖಾದರ್ ಪೆರಾಳ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಹಂಝ ಮದನಿ ಮಿತ್ತೂರು ಸಭೆಯನ್ನು ಉದ್ಘಾಟಿಸಿದರು. ಎಸ್‌ವೈಎಸ್ ಬಂಟ್ವಾಳ ಸೆಂಟರ್‌ನ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್, ಬಂಟ್ವಾಳ ಘಟಕ ಅಧ್ಯಕ್ಷ ಅಬ್ದುಲ್ ರಶೀದ್ ವಗ್ಗ, ಜಿಲ್ಲಾ ಕಾರ್ಯದರ್ಶಿ ಶರೀಫ್ ನಂದಾವರ, ಅಬ್ದುಲ್ಲಾ ಕೊಳಕೆ, ಹಾರಿಸ್ ಪೆರಿಯಪಾದೆ ಮತ್ತಿತರರು ಉಪಸ್ಥಿತರಿದ್ದರು.