×
Ad

​ಕನ್ನಡ ರಾಜ್ಯೋತ್ಸವ: ಕನ್ನಡ ಭಾಷಾ ಕವನಗಳ ಆಹ್ವಾನ

Update: 2017-10-14 21:50 IST

ಮಂಗಳೂರು, ಅ. 14: ನವಂಬರ್ 1ರಂದು ಕನ್ನಡ ರಾಜ್ಯೋತ್ಸವ ಸಮಾರಂಭದ ಪ್ರಯುಕ್ತ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಗರದ ಪುರಭವನದಲ್ಲಿ ಕನ್ನಡ ಭಾಷಾ ಕಗೋಷ್ಠಿಯನ್ನು ಆಯೋಜಿಸಿದೆ. ಈ ಕಗೋಷ್ಠಿಯಲ್ಲಿ ಪ್ರಸ್ತುತ ಪಡಿಸುವರೇ ಕನ್ನಡ ಭಾಷೆಯ ಸ್ವರಚಿತ ಕವನಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲೆಯ ಪ್ರತಿಭಾನ್ವಿತ ಕವಿಗಳು ತಾವೇ ರಚಿಸಿದ ಕವನಗಳನ್ನು ಅ.26ರೊಳಗೆ ಅಧ್ಯಕ್ಷರು, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕಲ್ಕೂರ ಪ್ರತಿಷ್ಠಾನ, ಶ್ರೀಕೃಷ್ಣ ಕಾಂಪ್ಲೆಕ್ಸ್, ಮಹಾತ್ಮಗಾಂಧಿ ರಸ್ತೆ, ಕೊಡಿಯಾಲ್‌ಬೈಲ್, ಮಂಗಳೂರು ಈ ವಿಳಾಸಕ್ಕೆ ತಲುಪುವಂತೆ ಕಳುಹಿಸಿಕೊಡಲು ಕೋರಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News