ಸೌದಿ ರಾಜಧಾನಿ ರಿಯಾದ್ ನಲ್ಲಿ ಬೆಂಕಿ ಅನಾಹುತ: 10 ಮಂದಿ ಮೃತ್ಯು

Update: 2017-10-15 16:04 GMT

ರಿಯಾದ್,ಅ.15: ಇಲ್ಲಿಯ ಬಡಿಗತನ ಕಾರ್ಯಾಗಾರವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ.

ರವಿವಾರ ರಾತ್ರಿ ಈ ಬೆಂಕಿ ಅನಾಹುತ ಸಂಭವಿಸಿದ್ದು, ಇತರ ಮೂರು ಜನರು ಗಾಯಗೊಂಡಿದ್ದಾರೆ. ಮೃತರನ್ನು ಇನ್ನಷ್ಟೇ ಗುರುತಿಸಬೇಕಾಗಿದೆ ಎಂದು ಸೌದಿ ಅರೇಬಿಯಾದ ನಾಗರಿಕ ರಕ್ಷಣಾ ಇಲಾಖೆಯು ಟ್ವೀಟಿಸಿದೆ.

ಬದ್ರ್ ಪ್ರದೇಶದಲ್ಲಿ ಈ ಅವಘಡ ನಡೆದಿದ್ದು, ಅಗ್ನಿಶಾಮಕ ದಳವು ಹಲವಾರು ಗಂಟೆಗಳ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದುಬರಬೇಕಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News