ರಸ್ತೆ ಅಪಘಾತ: ಬೈಕ್ ಸವಾರನಿಗೆ ಗಾಯ
Update: 2017-10-16 17:03 IST
ಚಿಕ್ಕಮಗಳೂರು, ಅ.16. ಬೈಕ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಸೋಮವಾರದಂದು ನಡೆದಿದೆ.
ಗಾಯಗೊಂಡ ಬೈಕ್ ಸವಾರನನ್ನು ಪುತ್ತೂರು ತಾಲೂಕಿನ ಕಡಬ ಸಮೀಪದ ಕುಟ್ರುಪ್ಪಾಡಿ ಗ್ರಾಮದ ಕಾಡುಮನೆ ನಿವಾಸಿ ಕೃಷ್ಣಪ್ಪ ಗೌಡ ಎಂಬವರ ಪುತ್ರ ನಾಗೇಶ್ ಎಂದು ಗುರುತಿಸಲಾಗಿದೆ.
ಇವರು ತನ್ನ ಬೈಕಿನಲ್ಲಿ ಚಾರ್ಮಾಡಿ ಘಾಟ್ ನಲ್ಲಿ ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬಂದ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ನಾಗೇಶ್ ರನ್ನು ಅಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಣಕಲ್ ಪೊಲೀಸರು ಅಗಮಿಸಿ ಪರಿಶೀಲನೆ ನಡೆಸಿದ್ದಾರೆ.