ಜನವರಿ ಮೊದಲ ವಾರದಲ್ಲಿ ಪಿಲಿಕುಳ ಡಿಜಿಟಲ್ ತಾರಾಲಯ ಲೋಕಾರ್ಪಣೆ: ಸಚಿವ ಎಂ.ಆರ್.ಸೀತಾರಾಂ

Update: 2017-10-16 12:57 GMT

ಬೆಂಗಳೂರು, ಅ. 16: ಜನವರಿ ಮೊದಲನೆ ವಾರದಲ್ಲಿ ಮಂಗಳೂರಿನ ಪಿಲಿಕುಳದಲ್ಲಿ ನೂತನವಾಗಿ ನಿರ್ಮಿಸಿರುವ ದೇಶದ ಮೊಟ್ಟ ಮೊದಲ ಡಿಜಿಟಲ್ ತಾರಾಲಯವನ್ನು ಲೋಕಾರ್ಪಣೆ ಮಾಡಲಾಗುವುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎಂ.ಆರ್.ಸೀತಾರಾಂ ಇಂದಿಲ್ಲಿ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿನ ತನ್ನ ಕೊಠಡಿಯಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಆರ್ಥಿಕ ವಲಯದ ವಿವಿಧ ಕ್ಷೇತ್ರಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಅಳವಡಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ ನೀತಿ ನಿರೂಪಣೆ ಮತ್ತಿತರ ವಿಚಾರಗಳ ಕುರಿತು ಮಾರ್ಗದರ್ಶನ ನೀಡಲು ಖ್ಯಾತ ವಿಜ್ಞಾನಿ ಪ್ರೊ. ಸಿ.ಎನ್.ಆರ್.ರಾವ್ ಅಧ್ಯಕ್ಷತೆಯಲ್ಲಿ ದಾರ್ಶನಿಕ ಸಮಿತಿ ರಚನೆ ಮಾಡಲಾಗಿದೆ ಎಂದರು.

2016-17ನೆ ಸಾಲಿನ ಆಯವ್ಯಯದಲ್ಲಿ ಉದ್ದೇಶಿತ ಕಾರ್ಯಕ್ರಮಕ್ಕೆ ಅನುದಾನ ಒದಗಿಸಿದ್ದು, ಏಳು ಕಾರ್ಯಕ್ರಮಗಳನ್ನು ಸಮಿತಿ ಶಿಫಾರಸ್ಸು ಮಾಡಿದೆ. ಇದರ ಮೂಲಕ ರಾಜ್ಯದ ವಿದ್ಯಾರ್ಥಿಗಳು, ಅಧ್ಯಾಪಕರು, ಸಂಶೋಧಕರಿಗೆ ಸಲಹೆ-ಸೂಚನೆ ನೀಡಲು ಸಹಕಾರಿಯಾಗಿದೆ ಎಂದು ಅವರು ಹೇಳಿದರು.

2016-17ನೆ ಸಾಲಿನಲ್ಲಿ ವಿವಿಧ ಭಾಗಗಳಿಂದ 1260 ಪ್ರಸ್ತಾವನೆಗಳು ಸ್ವೀಕೃತವಾಗಿದ್ದು, ಅವುಗಳನ್ನು ಪರಿಶೀಲಿಸಿದ ನಂತರ 143 ಯೋಜನೆಗಳಿಗೆ ಧನ ಸಹಾಯ ನೀಡಲಾಗುತ್ತಿದೆ. ವಿಜ್ಞಾನ, ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಶ್ರೇಷ್ಠ ಕೇಂದ್ರಗಳ ಸ್ಥಾಪನೆಗೆ 180ಲಕ್ಷ ರೂ., ವಿಜ್ಞಾನ ಶಿಕ್ಷಣದ ಸೃಜನಶೀಲ ಕೇಂದ್ರಗಳ ಸ್ಥಾಪನೆಗೆ 240ಲಕ್ಷ ರೂ.ಸೇರಿ 7ಕಾರ್ಯಕ್ರಮಗಳಿಗೆ ನೆರವು ನೀಡಲಾಗುತ್ತಿದೆ ಎಂದು ಅವರು ವಿವರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News