ಜಮ್ಮು: ಯುವತಿಯ ಸಾಮೂಹಿಕ ಅತ್ಯಾಚಾರ
Update: 2017-10-17 19:05 IST
ಶ್ರೀನಗರ, ಅ.17: 17ರ ಹರೆಯದ ಯುವತಿಯನ್ನು ಅಪಹರಿಸಿದ ಮೂವರು ಆಕೆಯನ್ನು ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಜಮ್ಮುವಿನಲ್ಲಿ ನಡೆದಿದೆ.
ತನ್ನನ್ನು ಅಪಹರಿಸಿದ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿರುವುದಾಗಿ ಯುವತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇನ್ನೊಬ್ಬನ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.