ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಪ್ರತಿಭಟನೆ

Update: 2017-10-17 13:41 GMT

ಬೆಂಗಳೂರು, ಅ.17: ದೀಪಾವಳಿ ಹಬ್ಬಕ್ಕೆ ಪೆರೋಲ್ ಮೇಲೆ ತೆರಳಲು ಅವಕಾಶ ನೀಡಲಿಲ್ಲ ಎಂದು ಆರೋಪಿಸಿ ಪರಪ್ಪನ ಅಗ್ರಹಾರದಲ್ಲಿ ಕೈದಿಗಳು ದಿಢೀರ್ ಪ್ರತಿಭಟನೆ ನಡೆಸಿದರು ಎಂದು ತಿಳಿದು ಬಂದಿದೆ.

ಮಂಗಳವಾರ ಬೆಳಗ್ಗೆಯಿಂದಲೇ ಹೊರಗಿನಿಂದ ಊಟ ತರಲು ಅವಕಾಶ ನೀಡಲಿಲ್ಲ ಎಂದು ಆರಂಭವಾದ ಪ್ರತಿಭಟನೆಯಿಂದ ಜೈಲು ಅಧಿಕಾರಿಗಳು ತಬ್ಬಿಬ್ಬಾದರು. ವೈಯಕ್ತಿಕವಾಗಿ ಮನೆಯಿಂದ ಊಟ ತರಿಸಿಕೊಳ್ಳಲು ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ. ಜೈಲಿನ ಊಟ ತಿಂದು ಹಲವಾರು ಮಂದಿಗೆ ಆರೋಗ್ಯ ಹದಗೆಟ್ಟಿದೆ. ಇಂತಹ ಸಂದರ್ಭದಲ್ಲಿ ಪೆರೋಲ್ ಮೇಲೆ ಬಿಡುಗಡೆ ಮಾಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ಕೈದಿಗಳು ಕಿಡಿಕಾರಿದ್ದಾರೆ ಎನ್ನಲಾಗಿದೆ.

ಜೈಲಿನಲ್ಲಿ ನೀರಿನ, ಶೌಚಾಲಯದ ವ್ಯವಸ್ಥೆ ಸೇರಿ ಇನ್ನಿತರೆ ಮೂಲಸೌಲಭ್ಯಗಳ ಕೊರತೆ ಇದೆ. ಎಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಪ್ರತಿಭಟನೆ ನಡೆಸಿದರು ಎನ್ನಲಾಗಿದ್ದು, ಕಾರಾಗೃಹ ಇಲಾಖೆಯ ಹೆಚ್ಚುವರಿ ಮಹಾ ನಿರ್ದೇಶಕ ಎನ್.ಎಸ್.ಮೇಘರಿಕ್ ಸ್ಥಳಕ್ಕೆ ತೆರಳಿ ಪ್ರತಿಭಟನಾ ನಿರತ ಕೈದಿಗಳ ಜತೆ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News