×
Ad

ನಿರ್ಲಕ್ಷ್ಯಕ್ಕೆ ಆಸ್ಪತ್ರೆ ವೈದ್ಯರು ಬಾಧ್ಯಸ್ತರು: ಎನ್‌ಸಿಡಿಆರ್‌ಸಿ ಆದೇಶಕ್ಕೆ ಸುಪ್ರೀಂ ತಡೆ

Update: 2017-10-17 22:48 IST

ಹೊಸದಿಲ್ಲಿ, ಅ. 17: ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಪರಿಹಾರ ನೀಡಲು ವೈದ್ಯರು ಹಾಗೂ ಆಸ್ಪತ್ರೆಗಳು ಬಾಧ್ಯಸ್ಥರಾಗಲು ಗ್ರಾಹಕ ರಕ್ಷಣಾ ಕಾಯ್ದೆ ವ್ಯಾಪ್ತಿಯಲ್ಲಿ ಸರಕಾರಿ ಆಸ್ಪತ್ರೆಗಳನ್ನು ತಂದು ಉಚಿತ ವೈದ್ಯಕೀಯ ಸೌಲಭ್ಯ ನೀಡುವ ರಾಷ್ಟ್ರೀಯ ಗ್ರಾಹಕ ವಿವಾದ ಪರಿಹಾರ ಆಯೋಗ (ಎನ್‌ಸಿಡಿಆರ್‌ಸಿ)ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ.

ಗ್ರಾಹಕ ರಕ್ಷಣಾ ಕಾಯ್ದೆ ಅಡಿಯಲ್ಲಿ ರೋಗಿಗಳಿಗೆ ಎಲ್ಲ ಸರಕಾರಿ ಆಸ್ಪತ್ರೆಗಳು ಉಚಿತ ಚಿಕಿತ್ಸೆ ನೀಡುವ ಎನ್‌ಸಿಡಿಆರ್‌ನ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಲೇರಿದ ಕೇಂದ್ರದ ಮನವಿಯನ್ನು ವಿಚಾರಣೆಗೆ ನಡೆಸಲು ನ್ಯಾಯಮೂರ್ತಿ ಮದನ್ ಬಿ. ಲೋಕುರ್ ಹಾಗೂ ದೀಪಕ್ ಮಿಶ್ರಾ ಅವರನ್ನೊಳಗೊಂಡ ಪೀಠ ಒಪ್ಪಿಕೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News