ಎಸ್ಸಿ-ಎಸ್ಟಿಗೆ ನಿವೇಶನ ಹಂಚಿಕೆ ಮಾಡದೆ ವಂಚನೆ: ಆರೋಪ

Update: 2017-10-17 18:13 GMT

ಚಿಕ್ಕಮಗಳೂರು, ಅ.17: ಚಿಕ್ಕಮಗಳೂರು ತಾಲೂಕು ಬೆಳವಾಡಿ ಗ್ರಾಪಂನಲ್ಲಿ ಮೀಸಲಾತಿ ಅನ್ವಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಪ.ಜಾತಿ ಮತ್ತು ವರ್ಗದವರಿಗೆ ನಿವೇಶನಗಳನ್ನು ಹಂಚಿಕೆ ಮಾಡದೇ ವಂಚಿಸಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಎಂ.ರಮೇಶ್ ಆರೋಪಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳವಾಡಿ ಗ್ರಾಮದ 1/1, 1/2, 1/3 ಯಲ್ಲಿ 2008ರಲ್ಲಿ ಬೆಳವಾಡಿ ಗ್ರಾಪಂ ಗ್ರಾಮಸಭೆಯಲ್ಲಿ ಸ್ಥಳೀಯ ನಿವೇಶನ ರಹಿತರಿಗೆ 133 ನಿವೇಶನಗಳನ್ನು ಹಂಚಿಕೆ ಮಾಡಿತ್ತು. ಈ ಹಂಚಿಕೆ ಪ್ರಕ್ರಿಯೆಯಲ್ಲಿ ಮೀಸಲಾತಿ ನಿಯಮವನ್ನು ಗಾಳಿಗೆ ತೂರಿದ್ದಾರೆ ಎಂದು ದೂರಿದ್ದಾರೆ.

ಈ ಅನ್ಯಾಯವನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಕಚೆೇರಿ ಎದುರು ಪ್ರತಿಭಟನೆ ನಡೆಸಿ ಮನವಿ ನೀಡಿದ ಸಂದರ್ಭದಲ್ಲಿ ಉಳಿದಿರುವ 13 ನಿವೇಶನಗಳನ್ನು ದಲಿತರಿಗೆ ನೀಡಬೇಕೆಂದು ಆದೇಶ ಹೊರಡಿಸಲಾಗಿದ್ದರೂ ಅಧಿಕಾರಿಗಳು ಮತ್ತು ಸದಸ್ಯರು ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇತ್ತೀಚೆಗೆ ನಡೆದ ಗ್ರಾಮಸಭೆಯಲ್ಲಿ ಅನ್ಯಾಯದ ಬಗ್ಗೆ ಪ್ರಶ್ನಿಸಿದ್ದಕ್ಕೆ ಜಿಪಂ ಸದಸ್ಯ ಬೆಳವಾಡಿ ರವೀಂದ್ರ ಮತ್ತು ಚಂದ್ರಶೇಖರ್ ಮತ್ತಿತರರು ತಮ್ಮ ಮೇಲೆ ಹಲ್ಲೆ ನಡೆಸಿದ್ದರೂ ಈ ಕುರಿತು ಪೋಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News