ಪುಲ್ವಾಮ: ಪೊಲೀಸ್ ಅಧಿಕಾರಿಯನ್ನು ಗುಂಡಿಕ್ಕಿ ಕೊಂದ ಉಗ್ರಗಾಮಿಗಳು

Update: 2017-10-18 14:55 GMT

ಹೊಸದಿಲ್ಲಿ, ಅ.18: ಪೊಲೀಸ್ ಅಧಿಕಾರಿಯೊಬ್ಬರನ್ನು ಉಗ್ರಗಾಮಿಗಳು ಗುಂಡಿಕ್ಕಿ ಕೊಂದ ಘಟನೆ ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಜಿಲ್ಲೆಯಲ್ಲಿ ನಡೆದಿದೆ.

ತ್ರಾಲ್ ನ ಗುಟ್ರೂ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮೃತಪಟ್ಟ ಪೊಲೀಸ್ ಅಧಿಕಾರಿಯನ್ನು ಹಲೀಮ್ ಗುಜ್ಜರ್ ಎಂದು ಗುರುತಿಸಲಾಗಿದೆ.

ಗುಂಡೇಟಿನಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ಹಲೀಮ್ ರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.

ಈ ಘಟನೆಯ ನಂತರ ಭದ್ರತಾ ಪಡೆಗಳು ಭಯೋತ್ಪಾದಕರಿಗಾಗಿ ಶೋಧಕಾರ್ಯ ಆರಂಭಿಸಿದೆ. 6 ತಿಂಗಳ ಅವಧಿಯಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ ಉಗ್ರರು ನಡೆಸಿರುವ 2ನೆ ದಾಳಿ ಇದಾಗಿದೆ. ಈ ಹಿಂದೆ ಜೂನ್ 15ರಂದು ಶಬೀರ್ ಅಹ್ಮದ್ ದಾರ್ ರನ್ನು ಉಗ್ರಗಾಮಿಗಳು ದಕ್ಷಿಣ ಕಾಶ್ಮೀರದ ಕುಲ್ಗಾಂ ನಲ್ಲಿ ಉಗ್ರರು ಗುಂಡಿಕ್ಕಿ ಕೊಂದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News