ಸರಗಳ್ಳತನ ಪ್ರಕರಣ: ಮೂವರ ಬಂಧನ

Update: 2017-10-19 13:10 GMT

ಬೆಂಗಳೂರು, ಅ.19: ಸರಗಳ್ಳತನ ಪ್ರಕರಣ ಸಂಬಂಧ ಮೂವರನ್ನು ಬಂಧಿಸಿರುವ ಮಹಾಲಕ್ಷ್ಮೀ ಲೇಔಟ್ ಠಾಣಾ ಪೊಲೀಸರು 700 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದ ಕೆಂಗೇರಿ ನಿವಾಸಿ ಪ್ರದೀಪ್, ಪುರುಷೋತ್ತಮ್, ಪ್ರಜ್ವಲ್ ಬಂಧಿತ ಆರೋಪಿಗಳಾಗಿದ್ದು, ಮತ್ತೊಬ್ಬ ತಲೆಮರೆಸಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಐಷಾರಾಮಿ ಜೀವನಕ್ಕಾಗಿ ಸರಗಳ್ಳತನ ಮಾಡುತ್ತಿದ್ದರು ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದ್ದು, ಇವರ ಬಂಧನದಿಂದಾಗಿ ಒಟ್ಟು 18 ಪ್ರಕರಣಗಳನ್ನು ಭೇದಿಸಿ, ಕಾರು, ಬೈಕ್, ಸೈಕಲ್ ಹಾಗೂ ಎರಡು ಮೊಬೈಲ್ ವಶಕ್ಕೆ ಪಡೆದು ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News