ದ.ಕ. ಜಿಲ್ಲಾಧಿಕಾರಿಯಾಗಿ ಸಸಿಕಾಂತ್ ಸೆಂಥಿಲ್ ಅಧಿಕಾರ ಸ್ವೀಕಾರ

Update: 2017-10-19 14:06 GMT

ಮಂಗಳೂರು, ಅ.19: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಸಿಕಾಂತ್ ಸೆಂಥಿಲ್ ಎಸ್. ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.

ಪ್ರಭಾರ ಜಿಲ್ಲಾಧಿಕಾರಿ ಕುಮಾರ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ, ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್, ಜಿ.ಪಂ. ಉಪಕಾರ್ಯದರ್ಶಿ ಎನ್.ಆರ್. ಉಮೇಶ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಸಸಿಕಾಂತ್ ಸೆಂಥಿಲ್ ಅವರು ಇದುವರೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News