ಮಂಡ್ಯ: ಅಪರಿಚಿತ ವ್ಯಕ್ತಿಯ ಶವ ಪತ್ತೆ

Update: 2017-10-19 14:40 GMT

ಮಂಡ್ಯ, ಅ.19: ಪಾಂಡವಪುರ ಪಟ್ಟಣದ ಬಳಿ ವಿ.ಸಿ. ನಾಲೆಯಲ್ಲಿ ಸುಮಾರು 40 ವಯೋಮಾನದ ಅಪರಿಚಿತ ವ್ಯಕ್ತಿಯ ಶವ ಬುಧವಾರ ಪತ್ತೆಯಾಗಿದೆ.

ಸಾರ್ವಜನಿಕರಿಂದ ಮಾಹಿತಿ ತಿಳಿದ ಪೊಲೀಸರು ಶವವನ್ನು ಹೊರತೆಗೆದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪಂಚನಾಮೆ ನಡೆಸಿದ್ದಾರೆ.

ಕೈ, ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಕೊಲೆಯಾಗಿರಬಹುದೆಂದು ಶಂಕಿರಿಸಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News