ಆರೆಸ್ಸೆಸ್ ನಾಯಕನ ಹತ್ಯೆ ಪ್ರಕರಣದ ತನಿಖೆಯನ್ನು ಎನ್ ಐಎಗೆ ಹಸ್ತಾಂತರಿಸಿದ ಪಂಜಾಬ್ ಸರಕಾರ

Update: 2017-10-19 15:46 GMT

ಹೊಸದಿಲ್ಲಿ, ಅ,19: ಪಂಜಾಬ್ ನಲ್ಲಿ ಇತ್ತೀಚೆಗೆ ನಡೆದ ಆರೆಸ್ಸೆಸ್ ನಾಯಕನ ಹತ್ಯೆ ಪ್ರಕರಣದ ತನಿಖೆಯನ್ನು ಪಂಜಾಬ್ ಸರಕಾರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ)ಕ್ಕೆ ಹಸ್ತಾಂತರಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪಂಜಾಬ್ ಸಿಎಂ ಅಮರೀಂದರ್ ಸಿಂಗ್ , ಆರೆಸ್ಸೆಸ್ ನ ಮನವಿಯ ಹಿನ್ನೆಲೆಯಲ್ಲಿ ಹತ್ಯೆ ಪ್ರಕರಣವನ್ನು ಎನ್ ಐಎಗೆ ವರ್ಗಾಯಿಸುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಆದರೆ ಈ ಪ್ರಕರಣದಲ್ಲಿ ತನಿಖೆ ನಡೆಸಲಿದೆಯೇ ಎನ್ನುವ ಬಗ್ಗೆ ಎನ್ ಐಎಯಿಂದ ಯಾವುದೇ ತಕ್ಷಣದ ದೃಢೀಕರಣ ಸಿಕ್ಕಿಲ್ಲ. 

ಲುಧಿಯಾನದ ಕೈಲಾಶ್ ನಗರದಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಆರೆಸ್ಸೆಸ್ ನಾಯಕ ರವೀಂದರ್ ಗೊಸಾಯಿನ್ ರನ್ನು ಗುಂಡಿಕ್ಕಿ ಹತ್ಯೆಗೈದಿದ್ದರು.

ಈ ಪ್ರಕರಣದ ತನಿಖೆ ನಡೆಸಲು ಪಂಜಾಬ್ ಪೊಲೀಸರು ಡಿಸಿಪಿ ನೇತೃತ್ವದ ವಿಶೇಷ ತನಿಖಾ ದಳವೊಂದನ್ನು ರಚಿಸಿದ್ದರು. ಇದೀಗ ಆರೆಸ್ಸೆಸ್ ನಾಯಕ ಮನವಿಯ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಎನ್ ಐಎಗೆ ಹಸ್ತಾಂತರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News