ವೈದ್ಯಾಧಿಕಾರಿಗಳ ಹುದ್ದೆ: ದಾಖಲೆಗಳ ಪರಿಶೀಲನೆ

Update: 2017-10-19 16:01 GMT

ಬೆಂಗಳೂರು, ಅ.19: ಕರ್ನಾಟಕ ಲೋಕಸೇವಾ ಆಯೋಗವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯದಲ್ಲಿನ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ 476 ಹುದ್ದೆಗಳಿಗೆ ಅರ್ಹರಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಅ.27, 28 ಹಾಗೂ 30 ರಂದು ಬೆಳಿಗ್ಗೆ 9.30 ಗಂಟೆಗೆ ಮತ್ತು ವಧ್ಯಾಹ್ನ 2.30 ಗಂಟೆಗೆ ಬೆಂಗಳೂರಿನಲ್ಲಿರುವ ಆಯೋಗದ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ.

ಅರ್ಹ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಆಯೋಗದ ವೆಬ್‌ಸೈಟ್ http://kpsc.kar.nic.inನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಸೂಚನಾ ಪತ್ರಗಳನ್ನು ಆಯೋಗದ ಅಂತರ್ಜಾಲದಿಂದ ಅ.18 ರಿಂದ ಅಪ್ಲಿಕೇಶನ್ ಹಾಗೂ ರಿಜಿಸ್ಟ್ರೇಷನ್ ಗುರುತಿನ ಚೀಟಿ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಡೌನ್‌ಲೋಡ್ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News