ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಹುದ್ದೆ: ಅರ್ಜಿ ಆಹ್ವಾನ

Update: 2017-10-19 16:12 GMT

ಬೆಂಗಳೂರು, ಅ.19: ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಗಳಲ್ಲಿ ಖಾಲಿ ಇರುವ ಹಾಗೂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷರ ಸ್ಥಾನಕ್ಕೆ ಸೂಕ್ತರಾದವರನ್ನು ಆಯ್ಕೆ ಮಾಡುವ ಸಲುವಾಗಿ ನಿಗಧಿತ ಅರ್ಜಿ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ-01 ಹುದ್ದೆ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ 1ನೆ ಹೆಚ್ಚುವರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01 ಹುದ್ದೆ, (22.01.2018ರ ಅಪರಾಹ್ನದಿಂದ ಖಾಲಿಯಾಗುವ ಹುದ್ದೆಗೆ) ಚಿಕ್ಕಮಗಳೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 01 ಹುದ್ದೆಗೆ (20.01.2018ರ ಅಪರಾಹ್ನದಿಂದ ಖಾಲಿಯಾಗುವ ಹುದ್ದೆಗೆ) ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲಾ ನ್ಯಾಯಾಧೀಶರಾಗಿ ಸೇವೆಸಲ್ಲಿಸುತ್ತಿರುವ ಅಥವಾ ಜಿಲ್ಲಾ ನ್ಯಾಯಾಧೀಶರಾಗಿ ಸೇವೆಸಲ್ಲಿಸಿದವರು ಅಥವಾ ಜಿಲ್ಲಾ ನ್ಯಾಯಾಧೀಶರಾಗಿ ಆಯ್ಕೆ ಹೊಂದಲು ಅರ್ಹರಿರುವವರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಜಿಲ್ಲಾ ನ್ಯಾಯಾಧೀಶರಾಗಿ ಸೇವೆಸಲ್ಲಿಸುತ್ತಿರುವ ಅಥವಾ ಜಿಲ್ಲಾ ನ್ಯಾಯಾಧೀಶರಾಗಿ ನಿವೃತ್ತಿ ಹೊಂದಿದವರಿಗೆ ಆಯ್ಕೆಯಲ್ಲಿ ಆದ್ಯತೆಯನ್ನು ನೀಡಲಾಗುವುದು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷರ ಸೇವಾವಧಿಯು 5 ವರ್ಷ ಅಥವಾ 65 ವರ್ಷ ವಯಸ್ಸು ಪೂರ್ಣವಾಗುವವರೆಗೆ ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷರ ಹುದ್ದೆಗೆ ಆಯ್ಕೆಗೊಂಡವರು ಜಿಲ್ಲಾ ನ್ಯಾಯಾಧೀಶರ ವೃಂದದ ವೇತನ ಮತ್ತು ಕರ್ನಾಟಕ ರಾಜ್ಯ ಸರಕಾರದಿಂದ ಕಾಲಕಾಲಕ್ಕೆ ನೀಡುವ ಭತ್ತೆಗಳನ್ನು ಪಡೆಯಲು ಅರ್ಹರಿರುತ್ತಾರೆ. ಆಯ್ಕೆ ಸುತಿಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಇಚ್ಛಿಸುವಂತಹ ಅರ್ಹ ಅಭ್ಯರ್ಥಿಗಳು ಆಯ್ಕೆ ಬಯಸುವ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಗಳ ಹೆಸರನ್ನು ನಿಗದಿತ ಒಂದೇ ಅರ್ಜಿ ನಮೂನೆಯಲ್ಲಿ ಸ್ಪಷ್ಟವಾಗಿ ನಮೂದಿಸಬೇಕು. ಹಾಗೂ ನಿಗದಿತ ಅರ್ಜಿಯನ್ನು ಪೂರ್ಣವಾಗಿ ಭರ್ತಿ ಮಾಡಿ, ಜನ್ಮ ದಿನಾಂಕ, ವಿದ್ಯಾರ್ಹತೆ ಹಾಗೂ ಅನುಭವಕ್ಕೆ ಸಂಬಂಧಪಟ್ಟ ಅಗತ್ಯ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಹಾಗೂ 100ರೂ.ಗಳ ಭಾರತೀಯ ಪೋಸ್ಟಲ್ ಆರ್ಡರ್/ಡಿ.ಡಿ.ಯನ್ನು ಅಧ್ಯಕ್ಷರು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಬಸವ ಭವನ, ಬೆಂಗಳೂರು, ಇವರ ಹೆಸರಿನಲ್ಲಿ ಪಡೆದು ಅರ್ಜಿಯಲ್ಲಿ ಶುಲ್ಕದ ವರಗಳನ್ನು ಬರೆದು ಅರ್ಜಿಯೊಂದಿಗೆ ಲಗತ್ತಿಸಬೇಕು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News