ಉಡುಪಿ: ಗ್ರಂಥಾಲಯ ಪ್ರಾಧಿಕಾರದ ಸಭೆ

Update: 2017-10-19 16:41 GMT

ಉಡುಪಿ, ಅ.19: ಉಡುಪಿ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ 30ನೇ ಸಾಮಾನ್ಯ ಸಭೆಯು ಉಡುಪಿ ಜಿಪಂನ ಮುಖ್ಯ ಕಾರ್ಯ ನಿರ್ವಾ ಹಕಾಧಿಕಾರಿ ಶಿವಾನಂದ ಕಾಪಶಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿತು.

2017-18ನೇ ಸಾಲಿಗೆ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರಕ್ಕೆ ನೂತನವಾಗಿ ನಾಮಕರಣಗೊಂಡ ಸದಸ್ಯರಲ್ಲಿ ವಸಂತಿ ಶೆಟ್ಟಿ ಬ್ರಹ್ಮಾವರ ಇವರನ್ನು ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ನೂತನ ಉಪಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಈ ಸಭೆಯಲ್ಲಿ ನೂತನ ಸದಸ್ಯರುಗಳಾದ ಪ್ರತಾಪ್ ಹೆಗ್ಡೆ ಮಾರಾಳಿ, ರೇಷ್ಮಾ ಉದಯ ಶೆಟ್ಟಿ, ಮಹೇಂದ್ರ ಕುಮಾರ್, ಆಶಾ ಟಿ., ಎಸ್. ಸಂಗೀತ ಜಾನ್ಸನ್, ಬಾಸ್ಕರ ಕನ್ಯಾನ ಹಾಗೂ ಜಿಲ್ಲಾ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಇವರುಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News