ತುಮಕೂರು: ಅ.22 ರಂದು ಅಂಬೇಡ್ಕರ್ ಜಯಂತಿ, ಗಣ್ಯರಿಗೆ ಸನ್ಮಾನ ಸಮಾರಂಭ

Update: 2017-10-19 17:18 GMT

ತುಮಕೂರು, ಅ.19: ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಮತ್ತು ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ವತಿಯಿಂದ ಅಕ್ಟೋಬರ್ 22 ರಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ 126ನೆ ಜಯಂತಿ ಆಚರಣೆ ಹಾಗೂ ಗಣ್ಯರಿಗೆ ಸನ್ಮಾನ ಸಮಾರಂಭ ನಡೆಸುವ ಸಂಬಂಧ ನಗರದ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಜಿಲ್ಲಾ ಅಧ್ಯಕ್ಷ ಎನ್.ಬಿ.ಸೋಮಶೇಖರ್ ಮಾತನಾಡಿ, ಅಂದು ನಗರದ ಜಿಲ್ಲಾಸ್ಪತ್ರೆ ಆಡಿ ಟೋರಿಯಂನಲ್ಲಿ ಸಮಾರಂಭ ನಡೆಯಲಿರುವ ಹಿನ್ನೆಲೆಯಲ್ಲಿ ಸಮುದಾಯದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗಣ್ಯರನ್ನು ಗುರುತಿಸಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್.ಕೆ. ನಿಧಿಕುಮಾರ್ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್‍ರವರು ದೇಶಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರಾಗಿದ್ದಾರೆ. ಇಂತಹ ಮಹಾನ್ ನಾಯಕರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಬೇಕೆಂಬ ಹಿನ್ನೆಲೆಯಲ್ಲಿ ಅಕ್ಟೋಬರ್ 22 ರಂದು ಅವರ 126ನೆ ಜನ್ಮ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದರು.

ಈ ಕಾರ್ಯಕ್ರಮಕ್ಕೆ ಸಮುದಾಯದ ಎಲ್ಲಾ ಮುಖಂಡರು, ಹಾಗೂ ಇತರೆ ಎಲ್ಲಾ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಗೌರವಾಧ್ಯಕ್ಷ ಹೆಗ್ಗೆರೆ ಕೃಷ್ಣಪ್ಪ ಮಾತನಾಡಿ, ದೇಶದ ಅಪ್ರತಿಮ ನಾಯಕರೊಲ್ಲೊಬ್ಬರಾದ ಡಾ.ಬಿ.ಆರ್. ಅಂಬೇಡ್ಕರ್‍ರವರು ಪ್ರತಿಹಳ್ಳಿ ಹಳ್ಳಿಯೂ ಅಭಿವೃದ್ಧಿ ಹೊಂದಿ ದೇಶ ಉನ್ನತ ಮಟ್ಟಕ್ಕೆ ಕೊಂಡೊಯ್ಯಬೇಕೆಂಬ ಕನಸು ಇಂದಿಗೂ ನನಸಾಗಿಲ್ಲ, ಇದು ಕೇವಲ ನಗರ ಪ್ರದೇಶಕ್ಕೆ ಸೀಮಿತವಾಗಿದೆಯೇ ಹೊರತು ಇನ್ನೂ ಗ್ರಾಮಗಳಿಗೆ ತಲುಪದೇ ಇರುವುದು ವಿಷಾದಿಸಿದರು.

ಸಭೆಯಲ್ಲಿ ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಪ್ರಧಾನ ಕಾರ್ಯದರ್ಶಿ ಗಿರೀಶ್, ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಯುವ ಜಿಲ್ಲಾಧ್ಯಕ್ಷ ಕೆ.ಗೋವಿಂದರಾಜ್, ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಆರ್. ಸುರೇಶ್, ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ, ಜಿ.ಎಸ್. ಮಂಜುನಾಥ್, ನಗರಾಧ್ಯಕ್ಷ ಕೆ.ಟಿ.ಮಾರುತಿ ಪ್ರಸಾದ್ ಸೇರಿದಂತೆ ಹಲವರು ಭಾಗವಹಿಸಿ ಚರ್ಚೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News