×
Ad

ವಿಷನ್-2025: ನೀಲನಕ್ಷೆ ಕಾರ್ಯಾಗಾರ

Update: 2017-10-19 23:07 IST

ಶಿವಮೊಗ್ಗ, ಅ.19: ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆಗಳು ಅ.23ರಂದು ಬೆಳಗ್ಗೆ 10ಗಂಟೆಗೆ ನಗರದ ನವುಲೆಯಲ್ಲಿರುವ ಜವಾಹರಲಾಲ್ ನೆಹರೂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿವಮೊಗ್ಗ ‘ವಿಷನ್-2025 ಡಾಕ್ಯುಮೆಂಟ್’ ಎಂಬ ನೀಲನಕ್ಷೆ ಮತ್ತು ಅನುಷ್ಠಾನ ಕಾರ್ಯಕ್ರಮಗಳಿಗೆ ಯೋಜನೆ ಸಿದ್ಧಪಡಿಸುವ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.

ಮುಂದಿನ ಏಳು ವರ್ಷಗಳ ಅವಧಿಯಲ್ಲಿ ಕರ್ನಾಟಕದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರಕಾರವು ಈ ಮಹತ್ವದ ಕಾರ್ಯಾಗಾರ ಆಯೋಜಿಸಿದೆ.

ನಗರದ ಮೂಲ ಸೌಕರ್ಯ, ಸ್ಮಾರ್ಟ್‌ಸಿಟಿ, ಸಾಮಾಜಿಕ ನ್ಯಾಯ, ಆರೋಗ್ಯ, ಶಿಕ್ಷಣ, ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ, ಕೈಗಾರಿಕೆ ಅಭಿವೃದ್ಧಿ, ಸೇವೆಗಳು, ಉದ್ಯೋಗ ಮತ್ತು ತಂತ್ರಜ್ಞಾನ ಮುಂತಾದ ವಿಷಯಗಳಲ್ಲಿ ಸಾರ್ವಜನಿಕರಿಂದ ಸಲಹೆ, ಪ್ರತಿಕ್ರಿಯೆ, ಅಭಿಪ್ರಾಯವನ್ನು ಪಡೆಯಲಾಗುವುದು.

ಈ ಕಾರ್ಯಾಗಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಭಾಗವಹಿಸುತ್ತಿದ್ದು, ಸಾರ್ವಜನಿಕರು, ತಜ್ಞರು, ಯುವಕರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಉದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಸಮಾಲೋಚನೆಯಲ್ಲಿ ಪಾಲ್ಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News