ಕಂಕನಾಡಿ ರಸ್ತೆ ಅಗಲೀಕರಣಕ್ಕೆ 2 ಕೋ.ರೂ.: ಶಾಸಕ ಜೆ.ಆರ್.ಲೋಬೊ

Update: 2017-10-20 11:46 GMT

ಮಂಗಳೂರು, ಅ.20: ಕಂಕನಾಡಿ ರೈಲ್ವೆ ಸ್ಟೇಷನ್ ರಸ್ತೆಯನ್ನು ಅಗಲೀಕರಣಗೊಳಿಸುವ ಉದ್ದೇಶದಿಂದ ಸರಕಾರದ ಲೋಕೋಪಯೋಗಿ ಇಲಾಖೆಯು 2 ಕೋ.ರೂ. ಮಂಜೂರು ಮಾಡಿದೆ ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು.

ಕಂಕನಾಡಿ ರೈಲ್ವೆ ಸ್ಟೇಷನ್ ರಸ್ತೆ ಅಗಲೀಕರಣಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡುತ್ತಿದ್ದರು.

ಪಂಪ್‌ವೆಲ್-ಪಡೀಲ್ ರಸ್ತೆ ಕಂಕನಾಡಿ ರೈಲ್ವೆ ಸ್ಟೇಷನ್‌ಗೆ ಹೋಗುವ ಪ್ರಮುಖ ರಸ್ತೆಯಾಗಿದ್ದರೂ ಕಿರಿದಾದ ಕಾರಣ ಓಡಾಟಕ್ಕೆ ಸಮಸ್ಯೆಯಾಗುತ್ತಿತ್ತು.

ಇದನ್ನು ಮನಗಂಡು ತಾವು ಮುತುವರ್ಜಿ ವಹಿಸಿ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿ ನೂತನ ರಸ್ತೆಗೆ ಹಣಮಂಜೂರು ಮಾಡಿಸಿದ್ದಾಗಿ ಹೇಳಿದರು.

ಈ ಸಂದರ್ಭ ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ, ಮಂಗಳೂರು ತಾಲೂಕು ಭೂನ್ಯಾಯ ಮಂಡಳಿ ಸದಸ್ಯ ಡೆನ್ನಿಸ್ ಡಿಸಿಲ್ವ ಹಾಜರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News