ಜನವರಿಯಲ್ಲಿ ಶಾಸಕ ಯೋಗೇಶ್ವರ್ ಬಿಜೆಪಿಗೆ ಸೇರ್ಪಡೆ

Update: 2017-10-20 12:46 GMT

ಬೆಂಗಳೂರು, ಅ.20: ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ ಬಿಜೆಪಿ ಸೇರ್ಪಡೆಗೆ ಒಪ್ಪಿಗೆ ಸೂಚಿಸಿದ್ದಾರೆ.

ಈ ಸಂಬಂಧ ಬಿಜೆಪಿಯ ಹಿರಿಯ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ತಕ್ಷಣವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷಕ್ಕೆ ಸೇರಿದರೆ ಇನ್ನೊಂದು ಚುನಾವಣೆ ಎದುರಿಸಬೇಕಾಗಬಹುದು ಎಂಬ ಕಾರಣದಿಂದ ಬಿಜೆಪಿ ಪಕ್ಷಕ್ಕೆ ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶಾಸಕ ಯೇಗೇಶ್ವರ್‌ಗೆ ಯಾವುದೇ ಷರತ್ತುಗಳನ್ನು ಹಾಕಿಲ್ಲ. ಅವರೂ ಯಾವುದೇ ರೀತಿಯ ಬೇಡಿಕೆಗಳನ್ನು ತಿಳಿಸಿಲ್ಲ. ಬಿಜೆಪಿ ಪಕ್ಷಕ್ಕೆ ಸೇರಲು ಒಮ್ಮತ ವ್ಯಕ್ತಪಡಿಸಿದ್ದಾರೆ. ಪಕ್ಷ ಸೇರಿದ ಬಳಿಕ ಮೇಲ್ಮಟ್ಟದ ಜವಾಬ್ದಾರಿ ನೀಡುವ ಕುರಿತು ಪಕ್ಷ ತೀರ್ಮಾನಕ್ಕೆ ಬರಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News