ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಗೌರಿ ಲಂಕೇಶ್ ಹತ್ಯೆಗೆ ಕಾರಣ: ಗುಪ್ತಚರ ಇಲಾಖೆ ಶಂಕೆ?

Update: 2017-10-20 13:38 GMT

ಬೆಂಗಳೂರು, ಅ.20: ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ನಡೆಸುತ್ತಿದ್ದ ಕಾರಣಕ್ಕಾಗಿಯೇ ಎಂ.ಎಂ.ಕಲ್ಬುರ್ಗಿ, ಲಿಂಗಣ್ಣ ಸತ್ಯಂಪೇಟೆ ಹಾಗೂ ಗೌರಿ ಲಂಕೇಶ್ ಹತ್ಯೆಯಾಗಿದ್ದಾರೆ ಎಂದು ಗುಪ್ತಚರ ಇಲಾಖೆ ಶಂಕಿಸಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಡಾ.ಎಸ್.ಎಂ.ಜಾಮದಾರ್ ಹೇಳಿದ್ದಾರೆ.

ನಗರದ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರಿ ಹತ್ಯೆಗೂ ಮುನ್ನ ತಮ್ಮ ಪತ್ರಿಕೆಯಲ್ಲಿ 20 ಪುಟಗಳ ಸವಿಸ್ತಾರವಾದ ಲೇಖನವನ್ನು ಪ್ರಕಟಿಸಿದ್ದರು. ಈ ಕಾರಣಕ್ಕಾಗಿಯೇ ಹತ್ಯೆ ನಡೆದಿರಬಹುದು ಎಂಬುದರ ಬಗ್ಗೆ ನಾನು ಹೇಳುವುದಿಲ್ಲ. ಆದರೆ ಹತ್ಯೆಯ ಹಿಂದೆ ಲಿಂಗಾಯತ ಧರ್ಮದ ಹೋರಾಟದ ಹಿನ್ನೆಲೆಯೂ ಕಾರಣ ಇರಬಹುದು ಎಂದು ಗುಪ್ತಚರ ಇಲಾಖೆ ಶಂಕಿಸಿದೆ ಎಂದರು.

ಜೀವ ಬೆದರಿಕೆ: ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ನಡೆಸುತ್ತಿರುವ ನನಗೂ ಕೂಡ ಬೆದರಿಕೆ ಬಂದಿದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. ನಾನೂ ಇಬ್ಬರನ್ನು ಅಂಗರಕ್ಷಕರನ್ನಾಗಿ ನೇಮಕ ಮಾಡಿಕೊಂಡಿದ್ದೇನೆ. ಜೀವ ಬೆದರಿಕೆಯ ಕುರಿತು ಇದುವರೆಗೂ ನನಗೆ ವೈಯಕ್ತಿಕವಾಗಿ ಯಾವುದೇ ಕರೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News