ನ.19ರಿಂದ ರಾಜ್ಯಕ್ಕೆ ರಾಹುಲ್ ಗಾಂಧಿ ಪ್ರವಾಸ

Update: 2017-10-20 14:01 GMT

ಬೆಂಗಳೂರು, ಅ. 20: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಾಬಲ್ಯವಿರುವ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸುವ ದೃಷ್ಟಿಯಿಂದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನ.19ರಿಂದ 3 ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ನ.19ರಂದು ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ನ.20ರಂದು ಚಿಕ್ಕಮಗಳೂರಿನಲ್ಲಿ ಜರಗಲಿರುವ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಮಧ್ಯೆಯೇ ಶಿವಮೊಗ್ಗದಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿಯೂ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಜೊತೆಗೆ ನ.21ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆಯಲಿರುವ ಮೀನುಗಾರರ ಸಮಾವೇಶದಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಅ.27ರಿಂದ ಒಂದು ತಿಂಗಳ ಕಾಲ ಕರ್ನಾಟಕದ ನೆರೆ ರಾಜ್ಯ ಕೇರಳದಲ್ಲಿ ಪ್ರವಾಸ ಕೈಗೊಳ್ಳಲಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಈ ಸಂದರ್ಭದಲ್ಲಿ ರಾಜ್ಯದಲ್ಲಿ ಏರ್ಪಡಿಸಿರುವ ಕಾರ್ಯಕರ್ತರ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News