ಬ್ಯಾಂಕ್ ಖಾತೆಗೆ ಆಧಾರ್ ನಂಬರ್ ಲಿಂಕಿಂಗ್ ಕಡ್ಡಾಯ: ಆರ್ ಬಿಐ
ಹೊಸದಿಲ್ಲಿ, ಅ.21: ಬ್ಯಾಂಕ್ ಖಾತೆಗಳೊಂದಿಗೆ ಆಧಾರ್ ಕಾರ್ಡ್ ನಂಬರನ್ನು ಲಿಂಕ್ ಮಾಡುವುದು ಕಡ್ಡಾಯ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೇಳಿದೆ.
ಬ್ಯಾಂಕ್ ಖಾತೆಗಳೊಂದಿಗೆ ಆಧಾರ್ ನಂಬರನ್ನು ಲಿಂಕ್ ಮಾಡುವುದು ಕಡ್ಡಾಯ ಎಂದು ಆರ್ ಬಿಐ ಯಾವುದೇ ಆದೇಶ ನೀಡಿಲ್ಲ ಎಂದು ಆರ್ ಟಿಐ ಅರ್ಜಿಯೊಂದಕ್ಕೆ ಉತ್ತರಿಸಲಾಗಿದೆ ಎನ್ನಲಾದ ಮಾಧ್ಯಮ ವರದಿಗಳಿಗೆ ಸಂಬಂಧಿಸಿ ಕೇಂದ್ರೀಯ ಬ್ಯಾಂಕ್ ಈ ಸ್ಪಷ್ಟನೆ ನೀಡಿದೆ.
ಬ್ಯಾಂಕ್ ಖಾತೆಗಳನ್ನು ತೆರೆಯಲು ಹಾಗು 50 ಸಾವಿರ ರೂ.ಗಿಂತ ಹೆಚ್ಚಿನ ವ್ಯವಹಾರಕ್ಕಾಗಿ ಆಧಾರ್ ಕಾರ್ಡನ್ನು ಕಡ್ಡಾಯಗೊಳಿಸಿತ್ತು. ಡಿಸೆಂಬರ್ 31ರ ಒಳಗಾಗಿ ಬ್ಯಾಂಕ್ ಖಾತೆಗಳಿಗೆ ಆಧಾರ್ ಕಾರ್ಡನ್ನುಲಿಂಕ್ ಮಾಡಬೇಕು ಎನ್ನಲಾಗಿತ್ತು.
ಆದರೆ ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ಬ್ಯಾಂಕ್ ಖಾತೆಗಳೊಂದಿಗೆ ಆಧಾರ್ ನಂಬರನ್ನು ಲಿಂಕ್ ಮಾಡುವ ಯಾವುದೇ ಆದೇಶ ನೀಡಿಲ್ಲ ಎಂದು ಆರ್ ಬಿಐ ಹೇಳಿರುವುದಾಗಿ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಬ್ಯಾಂಕ್ ಖಾತೆಗಳೊಂದಿಗೆ ಆಧಾರ್ ನಂಬರ್ ಲಿಂಕ್ ಮಾಡುವುದು ಕಡ್ಡಾಯ ಎಂದು ಆರ್ ಬಿಐ ಸ್ಪಷ್ಟಪಡಿಸಿದೆ.