ಉಳ್ಳಾಲ ಬ್ಲಾಕ್ ಕಾಂಗ್ರೆಸ್‍ನಿಂದ ಮಠಂದೂರು ವಿರುದ್ಧ ದೂರು

Update: 2017-10-21 17:12 GMT

ಉಳ್ಳಾಲ,ಅ.21: ಸಚಿವ ಬಿ.ರಮಾನಾಥ ರೈ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ವಿರುದ್ಧ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. 

ಮಠಂದೂರು ಅವರು ತಮ್ಮ ಘನತೆ ಮರೆತು ಸಾರ್ವಜನಿಕವಾಗಿ ರಮಾನಾಥ ರೈ ವಿರುದ್ಧ ಕೀಳು ಮಟ್ಟದ ಪದ ಬಳಸಿ ಜನರ ಭಾವನೆಗಳಿಗೆ ಘಾಸಿ ಉಂಟುಮಾಡಿದ್ದಾರೆ. ಇಂತಹ ಹೇಳಿಕೆ ಮುಖಾಂತರ ಜಿಲ್ಲೆಯಲ್ಲಿ ಗಲಭೆ ನಡೆ ಸೃಷ್ಟಿಸುವ ಸಂಚು ಹೊಂದಿರುವುದು ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಚಿವರ ಮಾನಹಾನಿ ಹಾಗೂ ಸಾರ್ವಜನಿಕರಿಗೆ ಪ್ರಚೋದನೆ ನೀಡಿದ ಆರೋಪದಲ್ಲಿ  ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ. 

ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ, ಉಪಾಧ್ಯಕ್ಷ ಮಹಮ್ಮದ್ ಮುಸ್ತಫಾ ಮಲಾರ್ ಹಾಗೂ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಕೋಡಿಜಾಲ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News