ಡ್ರಗ್ಸ್ ವಿರುದ್ಧ ಕ್ರಮಕ್ಕೆ ಎಸ್‌ಐಒ ಮನವಿ

Update: 2017-10-21 18:09 GMT

ಮಂಗಳೂರು, ಅ.21: ದ.ಕ. ಜಿಲ್ಲೆಯ ಕಾಲೇಜು ಕ್ಯಾಂಪಸ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾದಂತಹ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆೆ ವ್ಯಾಪಕವಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಎಸ್‌ಐಒ ದ.ಕ. ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್‌ರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ಕ್ಯಾಂಪಸ್ ಸಹಿತ ಸಾರ್ವಜನಿಕ ಸ್ಥಳಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದು ವಿದ್ಯಾರ್ಥಿಗಳನ್ನು ತೀವ್ರವಾಗಿ ಬಾಧಿಸಿರುವುದು ಎಸ್‌ಐಒ ಗಮನಿಸಿದೆ. ಎರಡು ವಾರಗಳಿಂದ ಮಾಧ್ಯಮಗಳಲ್ಲಿ ವರದಿಯಾಗಿರುವ ವಿಶೇಷ ವರದಿಗಳು ಹಾಗೂ ಇತ್ತೀಚೆಗೆ ಉಳ್ಳಾಲದಲ್ಲಿ ಝುಬೈರ್ ಕೊಲೆ ಪ್ರಕರಣವು ಇದಕ್ಕೆ ಸಾಕ್ಷಿಯಾಗಿವೆ. ಈ ಬಗ್ಗೆ ಜಿಲ್ಲಾ ಎಸ್ಪಿ ಹಾಗೂ ಮಂಗಳೂರು ಪೊಲೀಸ್ ಆಯುಕ್ತರು ಸಾರ್ವಜನಿಕರು, ಸಂಘ-ಸಂಸ್ಥೆಗಳ ಸಭೆ ಕರೆದು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಐಒ ದ.ಕ. ಜಿಲ್ಲಾಧ್ಯಕ್ಷ ತಲ್ಹಾ ಇಸ್ಮಾಯೀಲ್, ಕಾರ್ಯದರ್ಶಿ ಇರ್ಷಾದ್ ವೇಣೂರ್, ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಅಫ್ನಾನ್ ಹಸನ್, ಎಸ್‌ಐಒ ಮಂಗಳೂರು ನಗರ ಕಾರ್ಯದರ್ಶಿ ಮುಂಝಿರ್ ಅಹ್ಸನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News