ಸದೃಢ ದೇಶ ನಿರ್ಮಾಣಕ್ಕೆ ಪೊಲೀಸರು ಬದ್ಧರಾಗಬೇಕು: ಸಂಸದ ಪುಟ್ಟರಾಜು

Update: 2017-10-21 18:10 GMT

ಮಂಡ್ಯ, ಅ.21: ದೇಶವನ್ನು ಮತ್ತಷ್ಟು ಸದೃಢವಾಗಿ ಕಟ್ಟಲು ಪೊಲೀಸರು ಬದ್ಧರಾಗಬೇಕು. ಈ ನಿಟ್ಟಿನಲ್ಲಿ ಕರ್ತವ್ಯಕ್ಕಾಗಿ ಹಗಲಿರುಳು ಶ್ರಮಿಸುವ ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಆಗಬೇಕು ಎಂದು ಸಂಸದ ಸಿ.ಎಸ್.ಪುಟ್ಟರಾಜು ಅಭಿಪ್ರಾಯಪಟ್ಟಿದ್ದಾರೆ.

ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಶನಿವಾರ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರ ಸೇವೆ ಮತ್ತು ಬಲಿದಾನ ಅನನ್ಯ. ಎಷ್ಟೋ ಮಂದಿ ಪೊಲೀಸರು ಪ್ರಾಣದ ಹಂಗ ತೊರೆದು ಕರ್ತವ್ಯದ ಅವಧಿಯಲ್ಲಿ ಪ್ರಾಣ ಬಿಟ್ಟಿದ್ದಾರೆ. ಅಂತಹವರನ್ನು ಸ್ಮರಿಸುವ ಇಂತಹ ಕಾರ್ಯಕ್ರಮಗಳು ಇತರ ಪೊಲೀಸರಲ್ಲಿ ಆತ್ಮಸ್ಥೈರ್ಯ ತುಂಬುಲಿವೆ ಎಂದು ಹೇಳಿದರು.
ಜಿಲ್ಲಾಕಾರಿ ಎನ್.ಮಂಜುಶ್ರೀ ಮಾತನಾಡಿ, ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಜವಾಬ್ಧಾರಿ ದೊಡ್ಡದು. ಪೊಲೀಸರು
ಇಲ್ಲದ ಒಂದೇ ಒಂದು ದಿನವನ್ನು ನೆನೆಸಿಕೊಳ್ಳುವುದು ಸಾಧ್ಯವಿಲ್ಲ. ಕಾನೂನು ಚೌಕಟ್ಟನ್ನು ಮೀರಬಾರದು. ಕಾನೂನು ಅನುಷ್ಠಾನದ ಜವಾಬ್ದಾರಿ ಪೊಲೀಸರ ಮೇಲಿದೆ ಎಂದರು.

ಕಾರ್ಯಕ್ರಮದಲ್ಲಿ  ಮಾಜಿ ಶಾಸಕ ಎಂ.ಎಸ್.ಆತ್ಮಾನಂದ, ನಗರಸಭೆ ಅಧ್ಯಕ್ಷ ಹೊಸಹಳ್ಳಿ ಬೋರೇಗೌಡ, ಸದಸ್ಯ ಎಸ್.ಕೆ.ಶಿವ ಪ್ರಕಾಶ್‍ ಬಾಬು, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷೆ ಮೀರಾ ಶಿವಲಿಂಗಯ್ಯ, ಜಿಪಂ ಸಿಇಒ ಬಿ.ಶರತ್, ಎಎಸ್ಪಿ ಬಿ.ಎನ್.ಲಾವಣ್ಯ, ಡಿವೈಎಸ್ಪಿ ಚಂದ್ರಶೇಖರ್ ಇತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News