×
Ad

ಬೆಂಗಳೂರು: ಯಲಹಂಕದಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಕಾರ್ಯಕ್ರಮ

Update: 2017-10-22 18:37 IST

ಬೆಂಗಳೂರು, ಅ.22: ರಾಜ್ಯ ಸರಕಾರದ ಸಾಧನೆಗಳನ್ನು ಮತದಾರರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಮ್ಮಿಕೊಂಡಿರುವ ‘ಮನೆ ಮನೆಗೆ ಕಾಂಗ್ರೆಸ್’ ಕಾರ್ಯಕ್ರಮಕ್ಕೆ ಯಲಹಂಕ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು.

ರವಿವಾರ ನಗರದ ಯಲಹಂಕ ವ್ಯಾಪ್ತಿಯ ಅಟ್ಟೂರಿನಲ್ಲಿ ರಾಜ್ಯ ಸರಕಾರದ ಸಾಧನೆಯ ಮಾಹಿತಿಗಳನ್ನು ಒಳಗೊಂಡ ಕಿರು ಹೊತ್ತಿಗೆಗಳನ್ನು ಸ್ಥಳೀಯ ಕಾಂಗ್ರೆಸ್ ನಾಯಕರು ಮನೆ ಮನೆಗೆ ವಿತರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಜನಪ್ರಿಯ ಯೋಜನೆಗಳ ಬಗ್ಗೆ ಮಾಹಿತಿ ಹಂಚಿದರು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಹಿರಿಯ ಕಾಂಗ್ರೆಸ್ ಮುಖಂಡ ಎಂ.ಎನ್.ಗೋಪಾಲಕೃಷ್ಣ, ಪಕ್ಷದ ಬಲವರ್ಧನೆ ಹೆಚ್ಚಿಸಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಬಿಬಿಎಂಪಿ ವಾರ್ಡ್ ಯಲಹಂಕ ವ್ಯಾಪ್ತಿಯ ನಾಲ್ಕು ವಾರ್ಡ್ ಸೇರಿದಂತೆ ಗ್ರಾಪಂ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಪ್ರತಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸರಕಾರದ ಸಾಧನೆಗಳನ್ನು ಪ್ರಚಾರ ಪಡಿಸಿ ಕಾಂಗ್ರೆಸ್ ಸರಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಬೆಂ.ನಗರ ಜಿಲ್ಲಾ ಉಪಾಧ್ಯಕ್ಷ ನಾಗೇನಹಳ್ಳಿ ಶ್ರೀನಿವಾಸ್, ಯಲಹಂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಬಿ.ಬಾಷಾ, ಅಟ್ಟೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವರದರಾಜ್ ಸೇರಿ ಪ್ರಮುಖರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News