×
Ad

ಅ.23 ರಂದು ಸಂಚಾರ ಮಾರ್ಗ ಬದಲಾವಣೆ

Update: 2017-10-22 19:16 IST

ಬೆಂಗಳೂರು, ಅ.22: ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವ ಹಿನ್ನೆಲೆಯಲ್ಲಿ ಅ.23ರಂದು ನಗರ ವ್ಯಾಪ್ತಿ ಸಂಚಾರ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ.

ಸೋಮವಾರ ಮಧ್ಯಾಹ್ನ 3 ಗಂಟೆಗೆ ಫ್ರೀಡಂ ಪಾರ್ಕ್‌ನಿಂದ ಮೆರವಣಿಗೆ ಮತ್ತು ಸಂಜೆ 5 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವ ಸಮಾರಂಭ ನಡೆಯಲಿದ್ದು, ಸಾವಿರಾರು ಜನರು ಪಾಲ್ಗೊಳ್ಳುವ ಹಿನ್ನೆಲೆ ಕೆಲ ಕಡೆ ಸಂಚಾರ ಮಾರ್ಗ ಬದಲಾಯಿಸಲಾಗಿದೆ.

ಇಲ್ಲಿನ ಫ್ರೀಡಂ ಪಾರ್ಕ್, ಶೇಷಾದ್ರಿ ರಸ್ತೆ, ಮಹಾರಾಣಿ ಕಾಲೇಜ್, ಸರ್ವೀಸ್ ರಸ್ತೆ, ಪ್ಯಾಲೇಸ್ ರಸ್ತೆ, ಸಿಐಡಿ ಜಂಕ್ಷನ್ ಬಳಿ ಬಲ ತಿರುವು ಪಡೆದು ದೇವರಾಜ್ ಅರಸ್ ಪ್ರತಿಮೆ ದ್ವಾರದ ಮೂಲಕ ವಿಧಾನಸೌದ ಸೇರಿಬಹುದು.ಇನ್ನು ತ್ರಿಪುರ ನಿವಾಸಿನಿ ಮೈದಾನದಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

ವಾಹನ ಸಂಚಾರ ನಿರ್ಬಂಧ: ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ, ಕೆ.ಆರ್. ವೃತ್ತದಿಂದ ಪೊಲೀಸ್ ತಿಮ್ಮಯ್ಯ ಜಂಕ್ಷನ್‌ವರೆಗೆ. ದೇವರಾಜ್ ಅರಸ್ ರಸ್ತೆ, ಬಸವೇಶ್ವರ ವೃತ್ತದಿಂದ ಎಂ.ಎಸ್.ಬಿಲ್ಡಿಂಗ್ ಪ್ರವೇಶದ್ವಾರ. ಪಾರ್ಕ್ ಹೌಸ್ ರಸ್ತೆ, ಎ.ಜಿ.ಎಸ್. ಜಂಕ್ಷನ್ ನಿಂದ ಸಿ.ಐ.ಡಿ. ವತ್ತದ ವರೆಗೆ ಸಂಚಾರ ನಿರ್ಬಂಧಿಸಲಾಗಿದೆ.

ಅದೇ ರೀತಿ, ರೇಸ್ ಕೋರ್ಸ್ ರಸ್ತೆ, ಟ್ರಿಲೈಟ್ ಜಂಕ್ಷನ್ ನಿಂದ ಬಸವೇಶ್ವರ ವೃತ್ತ. ಟಿ.ಚೌಡಯ್ಯ ರಸ್ತೆ, ರಾಜಭವನ ಜಂಕ್ಷನ್ ನಿಂದ ಕಾವೇರಿ ಜಂಕ್ಷನ್, ರಮಣಮರ್ಹ ರಸ್ತೆ, ಕಾವೇರಿ ಜಂಕ್ಷನ್ ನಿಂದ ಮೇಖ್ರಿ ವೃತ್ತ, ಸಿ.ವಿ.ರಾಮನ್ ರಸ್ತೆ, ಬಿ.ಎಚ್.ಇ.ಎಲ್.ವೃತ್ತದಿಂದ ಮೇಖ್ರಿ ವೃತ್ತ. ಬಳ್ಳಾರಿ ರಸ್ತೆ, ಮೇಖ್ರಿ ವೃತ್ತದಿಂದ ಸಂಜಯನಗರ ಕ್ರಾಸ್‌ವರೆಗೂ ಸಹ ಸಂಚಾರ ನಿರ್ಬಂಧಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News