ಡೆನ್ಮಾರ್ಕ್ ಓಪನ್: ಶ್ರೀಕಾಂತ್ ಚಾಂಪಿಯನ್

Update: 2017-10-22 18:38 GMT

ಒಡೆನ್ಸೆ, ಅ.22: ಡೆನ್ಮಾರ್ಕ್ ಓಪನ್ ಸೂಪರ್ ಸರಣಿ ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್‌ನಲ್ಲಿ ಜಯ ಸಾಧಿಸಿರುವ ಕಿಡಂಬಿ ಶ್ರೀಕಾಂತ್ ಈ ವರ್ಷ ಮೂರನೆ ಬಾರಿ ಸೂಪರ್ ಸರಣಿ ಪ್ರಶಸ್ತಿಯನ್ನು ಬಾಚಿಕೊಂಡಿದ್ದಾರೆ.

ರವಿವಾರ ನಡೆದ ಪ್ರಶಸ್ತಿ ಸುತ್ತಿನ ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ಹೈದರಾಬಾದ್‌ನ ಶ್ರೀಕಾಂತ್ ದಕ್ಷಿಣ ಕೊರಿಯಾದ ಹಿರಿಯ ಆಟಗಾರ ಲೀ ಹ್ಯೂನ್‌ರನ್ನು 21-10, 21-5 ನೇರ ಗೇಮ್‌ಗಳ ಅಂತರದಿಂದ ಮಣಿಸುವ ಮೂಲಕ ಐದನೆ ಸೂಪರ್ ಸರಣಿ ಪ್ರಶಸ್ತಿ ತನ್ನದಾಗಿಸಿಕೊಂಡರು.

ಕೇವಲ 25 ನಿಮಿಷಗಳಲ್ಲಿ ಕೊನೆಗೊಂಡ ಪಂದ್ಯದಲ್ಲಿ ಶ್ರೀಕಾಂತ್ ಸಂಪೂರ್ಣ ಮೇಲುಗೈ ಸಾಧಿಸಿದ್ದು ಪಂದ್ಯ ಏಕಪಕ್ಷೀಯವಾಗಿ ಸಾಗಿತು. ಶ್ರೀಕಾಂತ್ ಸಾಧನೆಗೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್, ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋರ್ ಸಹಿತ ಹಲವು ಗಣ್ಯರು ಶುಭಾಶಯ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News