ಶ್ರೀಲಂಕಾ ವಿರುದ್ಧ ಸರಣಿಯಿಂದ ವಿಶ್ರಾಂತಿ ಪಡೆಯಲು ಕೊಹ್ಲಿ ಚಿಂತನೆ

Update: 2017-10-23 06:07 GMT

ಮುಂಬೈ, ಅ.23: ‘‘ವೈಯಕ್ತಿಕ ಕಾರಣ’’ವನ್ನು ಮುಂದಿಟ್ಟುಕೊಂಡು ಭಾರತದ ನಾಯಕ ವಿರಾಟ್ ಕೊಹ್ಲಿ ನವೆಂಬರ್-ಡಿಸೆಂಬರ್‌ನಲ್ಲಿ ಶ್ರೀಲಂಕಾ ವಿರುದ್ಧ ಸ್ವದೇಶದಲ್ಲಿ ನಡೆಯಲಿರುವ ಸರಣಿಯಿಂದ ವಿಶ್ರಾಂತಿ ಪಡೆಯುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ. ಭಾರತ ನವೆಂಬರ್ 16ರಿಂದ ಡಿ.24ರ ತನಕ ಶ್ರೀಲಂಕಾ ವಿರುದ್ಧ ಮೂರು ಟೆಸ್ಟ್, ಮೂರು ಏಕದಿನ ಹಾಗೂ ಮೂರು ಟ್ವೆಂಟಿ-20 ಸರಣಿ ಆಡಲಿದೆ.

ಕೆಲವು ವೈಯಕ್ತಿಕ ಕಾರಣಗಳಿಂದಾಗಿ ಡಿಸೆಂಬರ್‌ನಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಆಡಲು ತನ್ನಿಂದ ಸಾಧ್ಯವಾಗುತ್ತಿಲ್ಲ ಎಂದು ಬಿಸಿಸಿಐಗೆ ಕೊಹ್ಲಿ ಮಾಹಿತಿ ನೀಡಿದ್ದಾರೆ. ಕೊಹ್ಲಿ ಕಳೆದ ಕೆಲವು ಸಮಯದಿಂದ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದಾರೆ. ಜನವರಿಯಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕ ಪ್ರವಾಸಕ್ಕೆ ಮಾನಸಿಕವಾಗಿ ಸಿದ್ಧವಾಗಲು ಬಯಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆಯ್ಕೆ ಸಮಿತಿಯು ಸೋಮವಾರ ಮುಂಬೈನಲ್ಲಿ ಸಭೆ ಸೇರಲಿದ್ದು, ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟ್ವೆಂಟಿ-20 ಸರಣಿಗೆ ತಂಡವನ್ನು ಆಯ್ಕೆ ಮಾಡಲಿದ್ದಾರೆ.

 ಈ ವರ್ಷಾರಂಭದಲ್ಲಿ ಆಸ್ಟ್ರೇಲಿಯ ವಿರುದ್ಧ ಧರ್ಮಶಾಲಾದಲ್ಲಿ ನಡೆದಿದ್ದ ಟೆಸ್ಟ್ ಪಂದ್ಯದಲ್ಲಿ ಭುಜನೋವಿನಿಂದಾಗಿ ಕೊಹ್ಲಿ ಆಡಿರಲಿಲ್ಲ. ಕೊಹ್ಲಿ ಬದಲಿಗೆ ಅಜಿಂಕ್ಯ ರಹಾನೆ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News