ಗುಜರಾತ್ ಚುನಾವಣೆ: ಐದು ಕ್ಷೇತ್ರಗಳಲ್ಲಿ ಎಸ್ಪಿ ಸ್ಪರ್ಧೆ

Update: 2017-10-23 09:34 GMT

ಹೊಸದಿಲ್ಲಿ, ಅ.23: ‘‘ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ತನ್ನ ಪಕ್ಷ ಕೇವಲ ಐದು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಉಳಿದ ಕ್ಷೇತ್ರಗಳಲ್ಲಿ ತನ್ನ ಪಕ್ಷವು ಕಾಂಗ್ರೆಸ್‌ಗೆ ಬೆಂಬಲ ನೀಡಲಿದೆ’’ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಎಸ್ಪಿ ಈ ವರ್ಷಾರಂಭದಲ್ಲಿ ಉತ್ತರಪ್ರದೇಶದಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಿತ್ತು.

 ಡಿ.18ಕ್ಕಿಂತ ಮೊದಲು ಗುಜರಾತ್‌ನಲ್ಲಿ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಈಗಾಗಲೇ ಹೇಳಿದೆ. ಆಯೋಗವು ಹಿಮಾಚಲ ಪ್ರದೇಶದ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದೆ. ಆದರೆ ಗುಜರಾತ್ ಚುನಾವಣೆಯ ದಿನಾಂಕವನ್ನು ಪ್ರಕಟಿಸಿಲ್ಲ. ಆಯೋಗದ ಈ ಹೆಜ್ಜೆ ವಿಪಕ್ಷಗಳ ತೀವ್ರ ಟೀಕೆಗೆ ಗುರಿಯಾಗಿದೆ.

 ಗುಜರಾತ್ ಅಸೆಂಬ್ಲಿ 182 ಸದಸ್ಯರನ್ನು ಹೊಂದಿದ್ದು, ಈ ಪೈಕಿ 13 ಕ್ಷೇತ್ರ ಎಸ್‌ಸಿ ಹಾಗೂ 27 ಕ್ಷೇತ್ರಗಳು ಎಸ್ಟಿಗೆ ಮೀಸಲಾಗಿದೆ. ಕಳೆದ ಎರಡು ದಶಕಗಳಿಂದ ಬಿಜೆಪಿ ಗುಜರಾತ್‌ನಲ್ಲಿ ಆಡಳಿತ ನಡೆಸುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News