ಬಿಬಿಎಂಪಿ ಪಾಲಿಕೆ ಸದಸ್ಯ ಇಮ್ರಾನ್ ಪಾಷ ಮೇಲೆ 21 ಕೇಸುಗಳು, ಕ್ರಮಕ್ಕೆ ಆಗ್ರಹ

Update: 2017-10-23 14:02 GMT

ಬೆಂಗಳೂರು, ಅ.23: ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್ ಮತ್ತು ಚಾರ್ಜ್‌ಶೀಟ್ ದಾಖಲಾಗಿರುವ ಬಿಬಿಎಂಪಿ ಪಾಲಿಕೆ ಸದಸ್ಯ ಇಮ್ರಾನ್ ಪಾಷ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಅಲ್ತಾಫ್ ಪಾಷ ಆಗ್ರಹಿಸಿದ್ದಾರೆ.

 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಿಬಿಎಂಪಿ ಚುನಾವಣೆಯಲ್ಲಿ ವಾರ್ಡ್ ನಂ.135ನ ಪಾದರಾಯನಪುರ ವಾರ್ಡ್‌ನಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಗಾಗಿ ಸ್ಪರ್ಧಿಸಿದ್ದ ಇಮ್ರಾನ್ ಪಾಷ ಚುನಾವಣಾ ಅಧಿಕಾರಿಗಳಿಗೆ ಕೇವಲ 4 ಮೊಕದ್ದಮೆಗಳಿವೆ ಎಂದು ಸುಳ್ಳು ದಾಖಲೆಗಳನ್ನು ನೀಡಿದ್ದಾರೆ. ಆದರೆ, ಅವರ ಮೇಲೆ 21 ವಿವಿಧ ಪ್ರಕರಣಗಳಿವೆ ಎಂದು ಹೇಳಿದರು.

 ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದೆವು. ಅನಂತರ ಸೂಕ್ತ ತನಿಖೆ ನಡೆದು ಇಮ್ರಾನ್ ಪಾಷ ಮೇಲೆ ಎಫ್‌ಐಆರ್ ಹಾಗೂ ಚಾರ್ಜ್‌ಶೀಟ್ ದಾಖಲಾಗಿದೆ. ಹೀಗಾಗಿ, ಸುಪ್ರೀಂಕೋರ್ಟ್‌ನ ಆದೇಶದನ್ವಯ ಇಮ್ರಾನ್‌ಪಾಷ ಪಾಲಿಕೆ ಸದಸ್ಯತ್ವ ಅಮಾನ್ಯಗೊಳ್ಳಲಿದೆ. ಆದರೆ, ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಂಡಿರುವ ಇವರನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News