ತುಮಕೂರು : ಕನ್ನಡ ರಾಜ್ಯೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ
ತುಮಕೂರು,ಅ.23:ಜಿಲ್ಲಾಡಳಿತ ವತಿಯಿಂದ ನವೆಂಬರ್ 1 ರಂದು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ರವರು ದ್ವಜಾರೋಹಣ ನೆರವೇರಿಸಲಿದ್ದಾರೆ.
ಸಮಾರಂಭದಲ್ಲಿ ನಾಡುನುಡಿಯ ಮಹತ್ವವನ್ನು ಪ್ರತಿಬಿಂಭಿಸುವ ನಗರದ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮಕ್ಕೂ ಮುನ್ನ ನಾಡ ದೇವಿ ಭುವನೇಶ್ವರಿಯ ಪ್ರತಿಮೆಯನ್ನು ಅಲಂಕೃತ ವಾಹನದಲ್ಲಿ ಇರಿಸಿ, ಸರ್ಕಾರದ ವಿವಿಧ ಯೋಜನೆಗಳು ಹಾಗೂ ನಾಡು ನುಡಿಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸ್ಥಬ್ಧ ಚಿತ್ರಗಳು ಮತ್ತು ಕಲಾ ತಂಡಗಳೊಂದಿಗೆ ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಿಂದ ಆರಂಭಗೊಂಡು ಅಶೋಕ ರಸ್ತೆ, ಟೌನ್‍ಹಾಲ್ ವೃತ್ತ, ಬಿ.ಹೆಚ್.ರಸ್ತೆ, ಶಿವಕುಮಾರ ಸ್ವಾಮೀಜಿ ವೃತ್ತದ ಮೂಲಕ ನಗರದ ಮಹಾತ್ಮಗಾಂಧಿ ಕ್ರೀಡಾಂಗಣಕ್ಕೆ ಬಂದು ಸೇರುತ್ತದೆ.
ಅಂದು ಸಂಜೆ 4 ಗಂಟೆಗೆ ಗುಬ್ಬಿವೀರಣ್ಣ ಕಲಾಮಂದಿರದಲ್ಲಿ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಡಾ.ಎಸ್.ರಫೀಕ್ ಅಹಮದ್ ವಹಿಸುವರು.ಮುಖ್ಯಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್, ಪಾಲಿಕೆ ಮಹಾಪೌರರಾದ ಹೆಚ್.ರವಿಕುಮಾರ್,ಸಂಸದರಾದ ಎಸ್.ಪಿ.ಮುದ್ದಹನುಮೇಗೌಡ, ಡಿ.ಕೆ.ಸುರೇಶ್, ಬಿ.ಎನ್ ಚಂದ್ರಪ್ಪ ಸೇರಿದಂತೆ ಶಾಸಕರು ಹಾಗೂ ಸ್ಥಳಿಯ ಸಂಸ್ಥೆಗಳ ಜನಪ್ರತಿನಿಧಿಗಳು ಭಾಗವಹಿಸುವರು.