ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮನವರ ತತ್ವ ಆದರ್ಶಗಳು ದಾರಿ ದೀಪ : ಬಿ.ಎಸ್. ಚೈತ್ರಶ್ರೀ

Update: 2017-10-23 17:23 GMT

ಚಿಕ್ಕಮಗಳೂರು, ಅ.23:ಹೆಣ್ಣು ಮಕ್ಕಳಿಗೆ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮನ ಆತ್ಮ ಸ್ಥೈರ್ಯದ ಹೋರಾಟದ ಜೀವನವು ದಾರಿ ದೀಪವಾಗಬೇಕು ಎಂದು ಜಿಪಂ ಅಧ್ಯಕ್ಷೆ ಬಿ.ಎಸ್. ಚೈತ್ರಶ್ರೀ ತಿಳಿಸಿದರು.

ಅವರು ಸೋಮವಾರ ನಗರದ ವಾರ್ತಾಭವನದಲ್ಲಿ ಜಿಲ್ಲಾಡಳಿತದ ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಹೆಣ್ಣು ಮಕ್ಕಳು ತಮ್ಮ ಜೀವನದಲ್ಲಿ ಏನು ಬೇಕಾದರು ಸಾಧಿಸಬಹುದೆಂದು ತೋರಿಸಿಕೊಟ್ಟ ದಿಟ್ಟ ಮಹಿಳೆಯಾಗಿದ್ದಳು.ಇವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬ ಹೆಣ್ಣು ಮಕ್ಕಳು ಮೈಗೂಡಿಸಿಕೊಂಡು ಉತ್ತಮ ದಾರಿಯಲ್ಲಿ ಸಾಗಬೇಕೆಂದು ನಾವು ಇತರರಿಗೆ ಕಡಿಮೆ ಇಲ್ಲ ಎಂಬ ಮನೋಭಾವವನ್ನು ಹೊಂದಬೇಕೆಂದು ಕರೆ ನೀಡಿದರು.

 ಹೆಣ್ಣು ಮಕ್ಕಳು ಬಲಹೀನರು ಎಂಬ ಮನೋಭಾವವನ್ನು ಬಿಟ್ಟು ಎಲ್ಲಾ ಕ್ಷೇತ್ರಗಳಲ್ಲಿಯೂ ತಮ್ಮ ಕಾರ್ಯ ಚಟುವಟಿಕೆಗಳನ್ನು ವಿಸ್ತರಿಸುವುದರ ಜೊತೆಗೆ ದೇಶ ಪ್ರೇಮ ಹಾಗೂ ಉತ್ತಮ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು ಎಂದರು. ಕಿತ್ತೂರು ರಾಣಿ ಚೆನ್ನಮ್ಮ ಒಬ್ಬ ಹೆಣ್ಣು ಮಗಳಾಗಿದ್ದರೂ ತಮ್ಮ ಸಾಮ್ರಾಜ್ಯವನ್ನು ಉಳಿಸಿಕೊಳ್ಳಲು ಬ್ರಿಟೀಷರ ವಿರುದ್ಧ ವೀರಾವೇಶದಿಂದ ಹೋರಾಟ ಮಾಡಿರುವುದು ನಮ್ಮೆಲ್ಲರಿಗೂ ಸ್ಪೂರ್ತಿಯಾಗಿದೆ ಎಂದು ಹೇಳಿದರು.

 ಸಾಹಿತಿ ರವೀಶ್ ಕ್ಯಾತನಬೀಡು ಮಾತನಾಡಿ, ಸರ್ಕಾರ ದಾರ್ಶನಿಕರು ಹಾಗೂ ಸಂತರ ಜಯಂತಿಗಳನ್ನು ಆಚರಣೆ ಮಾಡುವುದು ಜನ ಸಾಮಾನ್ಯರು ತಮ್ಮ ದೈನಂದಿನ ನಡವಳಿಕೆಯಲ್ಲಿ ಅಂತವರ ಆದರ್ಶ ಮತ್ತು ತತ್ವಗಳನ್ನು ಮೈಗೂಡಿಸಿಕೊಂಡು ಹೊಸ ಬದುಕನ್ನು ಕಟ್ಟಿಕೊಳ್ಳಬೇಕು ಎಂಬ ಆಶಯದಿಂದ ಆಚರಿಸುತ್ತಿದೆ  ಎಂದು ನುಡಿದರು.

ರಾಜಕೀಯ ದುರೀಣರು ತಮ್ಮ ಆಪ್ತ ಕಾರ್ಯದರ್ಶಿಗಳನ್ನು ಸ್ವಜಾತಿಯವರನ್ನೇ ನೀಮಿಸಿಕೊಳ್ಳುವುದು ನಾವು ಕಾಣುತ್ತಿದ್ದೇವೆ ಆದರೆ ಚೆನ್ನಮ್ಮ ಅನ್ಯಕುಲದ ಸಂಗೊಳ್ಳಿ ರಾಯಣ್ಣನ ಮೇಲೆ ಅದಮ್ಯ ವಿಶ್ವಾಸ ಪ್ರೀತಿಯನ್ನು ಹೊಂದಿದ್ದಳು ಎಂದರು. ಇಂದಿನ ಯುವಜನರು ಉತ್ತಮ ಬದುಕು ರೂಪಿಸಿಕೊಳ್ಳುವಂತೆ ಕೆಲಸವನ್ನು ಮಾಡುವ ಜವಬ್ದಾರಿ ಸಮಾಜದ ಪ್ರತಿಯೊಬ್ಬರ ಮೇಲಿದೆ ಎಂದರು.

ನಗರಸಭೆ ಅಧ್ಯಕ್ಷೆ ಶಿಲ್ಪಾ ರಾಜಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಕಿತ್ತೂರು ರಾಣಿ ಚೆನ್ನಮ್ಮ ಮಹಿಳೆಯರಿಗೆ ಆದರ್ಶ ಪಾತ್ರರಾಗಿದ್ದಾರೆ ಎಂದರು.

ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಕಿತ್ತೂರು ರಾಣಿ ಚೆನ್ನಮ್ಮನ ಕುರಿತು ಮಡಿಕೆ ಪತ್ರಗಳನ್ನು ಬಿಡುಗಡೆ ಮಾಡಿದರು.
 ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ, ಉಪವಿಭಾಗಾಧಿಕಾರಿ ಸಂಗಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಅಧಿಕಾರಿ ಡಾ. ಸಿ.ರಮೇಶ್,  ವೀರಶೈವ ಯುವ ವೇದಿಕೆ ಅಧ್ಯಕ್ಷ ಪವನ್, ದಲಿತ ಮುಖಂಡ ಕೆ.ಟಿ.ರಾಧಾಕೃಷ್ಣ, ಬ್ರಾಹ್ಮಣ ಸಂಘದ ಅಧ್ಯಕ್ಷ ಮಂಜುನಾಥ್ ಜೋಶಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News