×
Ad

ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಮನೆ ಮೇಲೆ ಐಟಿ ದಾಳಿ

Update: 2017-10-24 19:43 IST

ಬೆಂಗಳೂರು, ಅ.24: ತೆರಿಗೆ ವಂಚನೆ ಮಾಡಿರುವ ರಾಜಕಾರಣಿಗಳು ಹಾಗೂ ಉದ್ಯಮಿಗಳ ಮೇಲೆ ನಡೆಸಿರುವ ದಾಳಿಯನ್ನು ತೀವ್ರಗೊಳಿಸಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಅವರ ಕಚೇರಿ ಹಾಗೂ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿ ಮಹತ್ವ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ಮೂರು ತಂಡಗಳು ಲಕ್ಷ್ಮಣ್ ಅವರ ಚರ್ಚ್ ಸ್ಟ್ರೀಟ್‌ನಲ್ಲಿರುವ ಕಚೇರಿ, ಸದಾಶಿವ ನಗರದಲ್ಲಿರುವ ಗೃಹ ಕಚೇರಿ ಹಾಗೂ ಬಸವೇಶ್ವರ ನಗರದಲ್ಲಿನ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲದೇ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರಿಗೂ ಆಪ್ತರಾಗಿರುವ ಲಕ್ಷ್ಮಣ್ ತೆರಿಗೆ ವಂಚನೆ ನಡೆಸಿರುವ ಮಾಹಿತಿ ಆಧರಿಸಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಧಿಕಾರಿಗಳಿಗೆ ತೆರಿಗೆ ಪಾವತಿಸದೆ ಇರುವ ನಗದು, ಚಿನ್ನಾಭರಣ ಇನ್ನಿತರ ಆಸ್ತಿ-ಪಾಸ್ತಿಗಳ ಮಾಹಿತಿ ನೀಡಲು ಲಕ್ಷ್ಮಣ್ ತಡಬಡಾಯಿಸಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News