ವೇಶ್ಯಾವಾಟಿಕೆ ದಂಧೆ: ಇಬ್ಬರ ಬಂಧನ
Update: 2017-10-24 19:55 IST
ಬೆಂಗಳೂರು, ಅ.24: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಮೂವರು ಯುವತಿಯರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಾಗರಬಾವಿಯ ಟೀಚರ್ಸ್ ಲೇಔಟ್‌ನ ಗಿರಿಜಾ ಅಲಿಯಾಸ್ ಗೀತಾ (30) ಮಹಾಲಕ್ಷ್ಮೀ ಲೇಔಟ್‌ನ ಗಣೇಶ್ ಬ್ಲಾಕ್‌ನ ಪುಟ್ಟಲಕ್ಷ್ಮೀ (45) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.
ಆರೋಪಿಗಳು ಕೆಲಸ ಕೊಡಿಸುವ ಆಮಿಷವೊಡ್ಡಿ, ಹೆಚ್ಚು ಹಣ ನೀಡುವ ಆಮಿಷ ತೋರಿಸಿ ಬೇರೆಡೆಯಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದು ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.