×
Ad

ಅಕ್ಟೋಬರ್ 25ರಂದು ಗುಜರಾತ್ ಚುನಾವಣೆ ದಿನಾಂಕ ಪ್ರಕಟ?

Update: 2017-10-24 20:20 IST

ಹೊಸದಿಲ್ಲಿ, ಅ.24: ಗುಜರಾತ್ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಅಕ್ಟೋಬರ್ 25ರಂದು ಪ್ರಕಟಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

 ಹಿಮಾಚಲಪ್ರದೇಶ ವಿಧಾನಸಭೆಗೆ ನಡೆಯಲಿರುವ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದ್ದ ಸಂದರ್ಭ ಗುಜರಾತ್ ಚುನಾವಣೆ ದಿನಾಂಕವನ್ನು ಪ್ರಕಟಿಸದ ಚುನಾವಣಾ ಆಯೋಗದ ಕ್ರಮವನ್ನು ವಿಪಕ್ಷಗಳು ಟೀಕಿಸಿದ್ದವು. ಗುಜರಾತ್ ರಾಜ್ಯಕ್ಕೆ ಇನ್ನಷ್ಟು ನೆರವಿನ ಕೊಡುಗೆ ಪ್ರಕಟಿಸಲು ಪ್ರಧಾನಿ ಮೋದಿಗೆ ಅನುವು ಮಾಡಿಕೊಡಲೆಂದೇ ಚುನಾವಣಾ ಆಯೋಗ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ವಿಪಕ್ಷಗಳು ಆರೋಪಿಸಿದ್ದವು.

 ಆದರೆ ಈ ಆರೋಪವನ್ನು ತಳ್ಳಿಹಾಕಿದ್ದ ಚುನಾವಣಾ ಆಯೋಗ, ಗುಜರಾತ್‌ನಲ್ಲಿ ಚುನಾವಣಾ ನೀತಿ ಸಂಹಿತೆ 45 ದಿನಕ್ಕಿಂತ ಹೆಚ್ಚಿನ ಅವಧಿಯಲ್ಲಿ ಜಾರಿಯಲ್ಲಿರಲು ತಾನು ಬಯಸುವುದಿಲ್ಲ ಎಂದು ಸ್ಪಷ್ಟನೆ ನೀಡಿತ್ತು. ಆದರೂ ಡಿಸೆಂಬರ್ 18ರ ಮೊದಲು ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿತ್ತು .

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News