ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಡ್ಡಿ ರಹಿತ ಸಾಲ

Update: 2017-10-24 16:34 GMT

ಬೆಂಗಳೂರು, ಅ.24: ವೈದ್ಯಕೀಯ, ಇಂಜಿನಿಯರಿಂಗ್, ಡಿಪ್ಲೊಮೋ, ಪದವಿ ಮತ್ತು ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ಸಂಸ್ಥೆ ಬಡ್ಡಿ ರಹಿತ ಸಾಲ ನೀಡಲು ಮುಂದಾಗಿದೆ.

ವೃತ್ತಿಪರ, ತಾಂತ್ರಿಕ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮೋ, ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿ, ಡಿಪ್ಲೊಮೋ ನರ್ಸಿಂಗ್, ಬಿಎ, ಬಿಕಾಂ, ಬಿಎಡ್, ಬಿಬಿಎಂ, ಬಿಸಿಎ, ಡಿಎಡ್, ಐಟಿಐ ಮುಂತಾದ ಕೋರ್ಸ್‌ನ್ನು ಮಾಡಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅವರು ವ್ಯಾಸಂಗ ಪೂರ್ಣಗೊಳಿಸುವವರಿಗೆ ಪ್ರತಿ ವರ್ಷಕ್ಕೆ ರೂ.20 ಸಾವಿರದಿಂದ 75ಸಾವಿರಗಳವರೆಗೆ ಬಡ್ಡಿ ರಹಿತ ಸಾಲ ನೀಡಲಾಗುತ್ತದೆ.

ಅರಿವು (ನೀಟ್) ಯೋಜನೆಯಡಿಯಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಮಾಡಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅವರ ಬೋಧನಾ ಶುಲ್ಕದ ಸರಕಾರಿ ಸೀಟ್‌ನ ಶೇ.100ರಷ್ಟು ಅಥವಾ ಖಾಸಗಿ ಸೀಟ್‌ನ ಶೇ.50ರಷ್ಟು ಸಾಲವನ್ನಾಗಿ ಮಂಜೂರು ಮಾಡಲಾಗುತ್ತದೆ. ವ್ಯಾಸಂಗ ಪೂರ್ಣಗೊಳಿಸಿದ ಒಂದು ವರ್ಷದ ನಂತರ ವಿದ್ಯಾರ್ಥಿಯು ಶೇ.2ರ ಸೇವಾ ಶುಲ್ಕದೊಂದಿಗೆ ಸಾಲವನ್ನು ಮರುಪಾವತಿ ಮಾಡಬೇಕಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News