ಗಾಂಜಾ ಸಾಗಾಟ ಆರೋಪ: ಇಬ್ಬರ ಬಂಧನ
Update: 2017-10-24 23:45 IST
ಕೊಣಾಜೆ, ಅ. 24: ಅಂಬ್ಲಮೊಗರು ಗ್ರಾಮದ ಮದಕ ಎಂಬಲ್ಲಿ ಬೈಕ್ ಮೂಲಕ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಕೊಣಾಜೆ ಪೊಲೀಸರು ಮಂಗಳವಾರ ಬಂಧಿಸಿ, ಬೈಕ್ ಹಾಗೂ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕುದ್ರೋಳಿಯ ಮಹಮ್ಮದ್ ಆಸೀಫ್ ಹಾಗೂ ಕುತ್ತಾರಿನ ಶೇಖ್ ಶಹಬಾರ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಇವರು ಅಂಬ್ಲಮೊಗರು ಗ್ರಾಮದ ಮದಕ ಎಂಬಲ್ಲಿ ಬೈಕ್ ಮೂಲಕ ಗಾಂಜಾ ಸಾಗಾಟ ಮಾಡುತ್ತಿದ್ದ ಸಂದರ್ಭ ಪೊಲೀಸರು ಬಂಧಿಸಿದ್ದಾರೆ. ಇವರನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಇವರಿಂದ ಐದು ಪ್ಯಾಕೆಟ್ ಗಾಂಜಾ ಹಾಗೂ ಬೈಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಇವರಿಬ್ಬರೂ ಗಾಂಜಾ ಸೇವನೆ ಮಾಡಿದ ಬಗ್ಗೆ ಪೊಲೀಸ್ ತನಿಖೆಯಿಂದ ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. ಆರೋಪಿಗಳು ಗಾಂಜಾವನ್ನು ವಿದ್ಯಾರ್ಥಿಗಳಿಗೆ ಹಾಗೂ ಯುವಕರಿಗೆ ಮಾರಾಟ ಮಾಡುತ್ತಿದ್ದ ರೆಂದು ಒಪ್ಪಿಕೊಂಡಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.