×
Ad

ರಾಷ್ಟ್ರಪತಿ ನಿರ್ಗಮನ

Update: 2017-10-25 21:24 IST

ಬೆಂಗಳೂರು, ಅ.25: ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಎರಡು ದಿನಗಳ ಭೇಟಿಗಾಗಿ ಕರ್ನಾಟಕ ರಾಜ್ಯಕ್ಕೆ ಆಗಮಿಸಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಬುಧವಾರ ಮಧ್ಯಾಹ್ನ ಹೊಸದಿಲ್ಲಿಗೆ ಹಿಂತಿರುಗಿದರು.

ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿಯವರನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ರಾಜ್ಯಪಾಲ ವಜುಭಾಯಿ ವಾಲ, ಗೃಹ ಸಚಿವ ರಾಮಲಿಂಗಾರೆಡ್ಡಿ, ಕೇಂದ್ರ ಸಚಿವ ಅನಂತಕುಮಾರ್, ಮುಖ್ಯ ಕಾರ್ಯದರ್ಶಿ ಸುಭಾಶ್‌ಚಂದ್ರ ಕುಂಟಿಯಾ, ಡಿಜಿಪಿ ರೂಪಕ್‌ ಕುಮಾರ್ ದತ್ತ, ನಗರ ಪೊಲೀಸ್ ಆಯುಕ್ತ ಸುನೀಲ್‌ಕುಮಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News