ಅ.28: ಉದ್ಯೋಗ ಮೇಳ
Update: 2017-10-25 21:58 IST
ಮಂಗಳೂರು, ಅ.25: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅ.28ರಂದು ನಗರದ ಕದ್ರಿಹಿಲ್ಸ್ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಿದೆ.
ಇದರಲ್ಲಿ ವಿವಿಧ ಖಾಸಗಿ ಕಂಪೆನಿಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಸಂದರ್ಶನವನ್ನು ಆಯೋಜಿಸಲಾಗಿದೆ. ಎಸೆಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಮತ್ತು ಬಿ.ಇ. ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಇದರಲ್ಲಿ ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ಸೂಕ್ತ ಬಯೋಡಾಟ ಮತ್ತು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದು. ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು (ದೂ.ಸಂ: 0824-2457139)ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.