×
Ad

ದಾವಣಗೆರೆ: ಟಿಪ್ಪು ಜಯಂತಿ ಪೂರ್ವಭಾವಿ ಸಭೆ

Update: 2017-10-25 22:45 IST

ದಾವಣಗೆರೆ, ಅ.25: ಕನಕದಾಸರ ಹಾಗೂ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ಆಯೋಜಿಸುವ ಕುರಿತು ಚರ್ಚಿಸಲು ಅ.27ರಂದು ಕ್ರಮವಾಗಿ ಸಂಜೆ 4.30 ಮತ್ತು 5 ಗಂಟೆಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ಸಭೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಆಗಮಿಸಿ, ಕನಕದಾಸರ ಜಯಂತಿ ಹಾಗೂ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯ ಬಗ್ಗೆ ಸಲಹೆಗಳನ್ನು ನೀಡುವಂತೆ ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News