ಪೇಜಾವರ ಶ್ರೀ ಆಸ್ಪತ್ರೆಗೆ ದಾಖಲು
Update: 2017-10-25 23:21 IST
ಉಡುಪಿ, ಅ. 25: ಆರೋಗ್ಯ ತಪಾಸಣೆಗಾಗಿ ಪೇಜಾವರ ಶ್ರೀ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಇಂದು ರಾತ್ರಿ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿರುವುದು ವರದಿಯಾಗಿದೆ.
ಅವರು ತಿಂಗಳುಗಳ ಹಿಂದೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಅವರು ಆರೋಗ್ಯ ತಪಾಸಣೆಗಾಗಿ ಪೂಜೆ ಪೂರೈಸಿದ ನಂತರ ಆಸ್ಪತ್ರೆಗೆ ತೆರಳಿದ್ದು, ಅಲ್ಲಿ ಅವರು ಒಳರೋಗಿಯಾಗಿ ದಾಖಲಾಗಿದ್ದಾರೆ. ಅವರಿಗೆ 2 ದಿನಗಳ ಚಿಕಿತ್ಸೆ ನೀಡುವ ಸಾಧ್ಯತೆ ಇದ್ದು, ಸ್ಕ್ಯಾನಿಂಗ್ ಹಾಗು ಹೆಚ್ಚಿನ ಚಿಕಿತ್ಸೆಗೆ ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಸ್ವಾಮೀಜಿ ಆರೋಗ್ಯವಾಗಿದ್ದಾರೆ, ಆತಂಕ ಬೇಡ ಎಂದು ಉಡುಪಿ ಕೃಷ್ಣ ಮಠದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.