ಮಡಿಕೇರಿ: ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗೆ ಚಾಲನೆ
ಮಡಿಕೇರಿ, ಅ.26 : ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬೋಯಿಕೇರಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಗರದ ಹಾಕಿ ಟರ್ಫ್ ಮೈದಾನದಲ್ಲಿ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಹಾಕಿ ಪಂದ್ಯಾವಳಿಗೆ ಜಿಪಂ ಅಧ್ಯಕ್ಷ ಬಿ.ಎ.ಹರೀಶ್ ಮತ್ತು ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮೂಕೊಂಡ ಶಶಿಸುಬ್ರಮಣಿ ಅವರು ಚಾಲನೆ ನೀಡಿದರು.
ಹಾಕಿ ಪಂದ್ಯಾವಳಿಯಲ್ಲಿ ಕಲಬುರ್ಗಿ ವಿಭಾಗ, ಬೆಂಗಳೂರು ವಿಭಾಗ, ಬೆಳಗಾವಿ ವಿಭಾಗ, ಮೈಸೂರು ವಿಭಾಗ ಕ್ರೀಡಾ ಶಾಲೆ, ಕೊಡಗಿನ ತಂಡಗಳು ಭಾಗವಹಿಸಿದ್ದವು.
ಕಾರ್ಯಕ್ರಮದಲ್ಲಿ ತಾಪಂ ಅಧ್ಯಕ್ಷ ತೆಕ್ಕಡೆ ಶೋಭಾ ಮೋಹನ್, ಸದಸ್ಯರಾದ ಅಪ್ಪು ರವೀಂದ್ರ, ಅಕ್ಷರ ದಾಸೋಹ ಜಿಲ್ಲಾ ಶಿಕ್ಷಣಾಧಿಕಾರಿಗಳಾದ ಎಚ್.ಕೆ.ಪಾಂಡು, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ಮಡಿಕೇರಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಎ.ಮೃತ್ಯುಂಜಯ, ಸೋಮವಾರಪೇಟೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಎಸ್.ಟಿ.ವೆಂಕಟೇಶ್, ಪ್ರೌ.ಶಾ.ಮು.ಶಿ. ಸಂಘದ ಅಧ್ಯಕ್ಷ ಎಸ್.ಕೆ.ಪ್ರಭು, ಎಸ್‌ಡಿಎಂಸಿ ಸ.ಮಾ.ಹಿ.ಪ್ರಾ.ಶಾಲೆ ಅಧ್ಯಕ್ಷರಾದ ಎಚ್.ಎ.ಆನಂದ, ಬೋಯಿಕೇರಿ ಎಸ್.ಡಿ.ಎಂ.ಸಿ. ಸ.ಮಾ.ಹಿ.ಪ್ರಾ.ಶಾಲೆ ಮುಖ್ಯ ಶಿಕ್ಷಕ ರಾಜು ಎಚ್.ಆರ್., ಬೋಯಿಕೇರಿ ದೈ.ಶಿ.ಶಿ.ಕ್ರೀಡಾ ಸಂಘಟಕ ಟಿ.ಟಿ.ಪೂರ್ಣೇಶ್ ಮತ್ತಿತರರು ಉಪಸ್ಥಿತರಿದ್ದರು.